ಗಂಗಾವತಿ: ತಾಲ್ಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಸೋಮವಾರ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ.
ಮೃತ ಯುವತಿಯನ್ನು ಹೊಸಬೆಣಕಲ್ ಗ್ರಾಮದ ಪ್ರೀತಿ ವೀರಭದ್ರಪ್ಪ ಬಳಿಗೇರ(17) ಎಂದು ಗುರುತಿಸಲಾಗಿದೆ.
ಯುವತಿ ಹೊಸಬೆಣಕಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಿಂದ ತಿಳಿದು ಬಂದಿದೆ.
ಇದಕ್ಕೂ ಮುನ್ನ ಎಡದಂಡೆ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದ್ದನ್ನು ಕಂಡ ಸ್ಥಳೀಯರು, ಹೊರತೆಗೆದು, ಪೊಲೀಸ್ ಠಾಣೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹಂಚಿಕೊಂಡಿದ್ದರು. ಮರಣೋತ್ತರ ಪರೀಕ್ಷೆಗೆ ನಗರದ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.