ADVERTISEMENT

ದೇವಸ್ಥಾನಕ್ಕೆ ಬಂದಿದ್ದ ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 7:56 IST
Last Updated 10 ಅಕ್ಟೋಬರ್ 2025, 7:56 IST
ಜಾಲಮ್ಮ
ಜಾಲಮ್ಮ   

ಮುನಿರಾಬಾದ್: ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಶೀಗಿ ಹುಣ್ಣಿಮೆ ಅಂಗವಾಗಿ ಮಂಗಳವಾರ ಬಂದಿದ್ದ ವೃದ್ಧೆಯೊಬ್ಬರು ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದಾರೆ.

ಮೃತರು ಆಂಧ್ರಪ್ರದೇಶದ ಉರವಕೊಂಡ ಗ್ರಾಮದ ಜಾಲಮ್ಮ (60) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತುಂಗಭದ್ರಾ ನದಿಯ ಕಡೆಗೆ ಹೊರಟ ಜಾಲಮ್ಮ ಅವರು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡರು. ಅವರನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. ಹುಣ್ಣಿಮೆಯ ಅಂಗವಾಗಿ ಲಕ್ಷಾಂತರ ಜನರು ದೇವಸ್ಥಾನಕ್ಕೆ ಭೇಟಿ ನೀಡಿದ ಕಾರಣ ಸಂಚಾರ ದಟ್ಟಣೆ ಉಂಟಾಗಿ ಉಸಿರಾಡಲು ಕೂಡ ಕಷ್ಟವಾಗಿ ಹಲವು ಜನ ಅಸ್ವಸ್ಥಗೊಂಡು ಚಿಕಿತ್ಸೆ ಪಡೆದುಕೊಂಡ ಬಗ್ಗೆ ಮಾಹಿತಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT