ಕಾರಟಗಿ: ‘ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ಈಚೆಗೆ ಕನಕದಾಸರ ಮೂರ್ತಿ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಶೀಘ್ರವೇ ಪೊಲೀಸ್ ಅಧಿಕಾರಿಗಳು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರೈತ ಜನ ಸಂಘದ ರಾಜ್ಯಾಧ್ಯಕ್ಷ ವೀರನಗೌಡ ಮಾಲಿಪಾಟೀಲ್ ಒತ್ತಾಯಿಸಿದರು.
ಈ ಘಟನೆಯಿಂದ ಸಾಮಾಜಿಕ ಸಾಮರಸ್ಯ, ಶಾಂತಿಗೆ ಭಂಗ ತರುವ ದುಷ್ಕರ್ಮಿಗಳು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮಕ್ಕೆ ಮುಂದಾಗಬೇಕು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.