ಕುಕನೂರು: ದೆಹಲಿಯ ಕೆಂಪು ಕೋಟೆಯಲ್ಲಿ ಆ.15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲ್ಲೂಕಿನ ಕುದರಿಮೋತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರೀದಾಬೇಗಂ ತಂಬಾಕದಾರ್ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಕೇಂದ್ರ ಸರ್ಕಾರದ ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಘನತ್ಯಾಜ್ಯ ವಿಲೇವಾರಿಯಂತಹ ಪ್ರಾಥಮಿಕ ಹಂತದ ಕಾರ್ಯಕ್ರಮಗಳ ಅನುಷ್ಠಾನ ಮಾನದಂಡವಾಗಿರಿಸಿಕೊಂಡು ಪಂಚಾಯತ್ ರಾಜ್ ಇಲಾಖೆ ಫರೀದಾಬೇಗಂ ಅವರನ್ನು ಆಯ್ಕೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.