
ಕೊಪ್ಪಳ: ತಾರತಮ್ಯದಿಂದ ಕೂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೊಪ್ಪಳ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದು ಈ ಕುರಿತು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಅವರಿಗೆ ಬರೆದ ಪತ್ರ ಸಲ್ಲಿಸಿದರು.
’ತಿದ್ದುಪಡಿ ಕಾಯ್ದೆ ಭಾರತದ ಸಂವಿಧಾನದಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಆದ್ದರಿಂದ ಅದನ್ನು ಅಂಗೀಕರಿಸಬಾರದು. ಮುಸ್ಲಿಮರ ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ನೀಡಿರುವ ಹಕ್ಕು ಯಥಾವತ್ತಾಗಿ ಮುಂದುವರಿಸಲು ಅವಕಾಶ ಕಲ್ಪಿಸಿ ಕೊಡಬೇಕು’ ಎಂದು ಆಗ್ರಹಿಸಿದರು.
ಯುಸೂಫಿಯಾ ಮಸೀದಿಯ ಹಜರತ್ ಮುಫ್ತಿ ನಜೀರ್ ಅಹ್ಮದ್ ಖಾದ್ರಿ ತಸ್ಕೀನ್, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಮುಖಂಡರಾದ ಅಸದ್ ಮೌಲಾನಾ, ಮೌಲಾನಾ ಸಿರಾಜ್ ಅಹಮದ್, ಖತೀಬ್ ಬಾಷು, ಅಕ್ಬರ ಪಲ್ಟನ್, ಹಿದಾಯತ್ ಉಲ್ಲಾ, ಕೆ.ಎಂ. ಸೈಯದ್, ಸಲೀಂ ಖಾದ್ರಿ, ಎಂ.ಡಿ. ಸಾಧಿಕ್, ನಿಜಾಮ್ ಮಾಳೆಕೊಪ್ಪ, ಫಾರೂಕ್ ಅತ್ತಾರ, ಮಾನ್ವಿ ಪಾಷಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.