ADVERTISEMENT

ಕೊಪ್ಪಳ: ಸಮಾನ ವೇತನ ನೀಡುವಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:36 IST
Last Updated 23 ಸೆಪ್ಟೆಂಬರ್ 2022, 15:36 IST
ಕೊಪ್ಪಳದಲ್ಲಿ ಶುಕ್ರವಾರ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಗುತ್ತಿಗೆ ನೌಕರರ ಒಕ್ಕೂಟದ ಜಿಲ್ಲಾ ಘಟಕ, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟಿಸಿದರು
ಕೊಪ್ಪಳದಲ್ಲಿ ಶುಕ್ರವಾರ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಗುತ್ತಿಗೆ ನೌಕರರ ಒಕ್ಕೂಟದ ಜಿಲ್ಲಾ ಘಟಕ, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟಿಸಿದರು   

ಕೊಪ್ಪಳ: ಇಲ್ಲಿನ ವಿದ್ಯುತ್‌ ಪ್ರಸರಣ ನಿಗಮದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸೇವೆಯನ್ನು ಕಾಯಂ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಗುತ್ತಿಗೆ ನೌಕರರ ಒಕ್ಕೂಟದ ಜಿಲ್ಲಾ ಘಟಕ, ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳುಪ್ರತಿಭಟಿಸಿದರು.

ಉಪ ಸ್ಟೇಷನ್‌ನಲ್ಲಿ ಆಪರೇಟರ್‌ ಮತ್ತು ಸಹಾಯಕರಾಗಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಸೇವಾಭದ್ರತೆ ಕಲ್ಪಿಸಬೇಕು, ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ವಜಾ ಮಾಡಬಾರದು ಎಂದು ಆಗ್ರಹಿಸಿದರು. ನಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗನೆ ಈಡೇರಿಸಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.