ADVERTISEMENT

ಅಗ್ನಿಪಥ ಯೋಜನೆ ವಾಪಸ್‌ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 8:49 IST
Last Updated 22 ಜೂನ್ 2022, 8:49 IST
ಅಗ್ನಿಪಥ ಯೋಜನೆ ವಿರೋಧಿಸಿ ಎಐಡಿವೈಒ ಸಂಘಟನೆ ವತಿಯಿಂದ ಕೊಪ್ಪಳದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು
ಅಗ್ನಿಪಥ ಯೋಜನೆ ವಿರೋಧಿಸಿ ಎಐಡಿವೈಒ ಸಂಘಟನೆ ವತಿಯಿಂದ ಕೊಪ್ಪಳದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು   

ಕೊಪ್ಪಳ: ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ಜಿಲ್ಲಾ ಸಮಿತಿ ಸದಸ್ಯರು ಬುಧವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಧಾನಿಗೆ ಬರೆದ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ನೀಡಿದರು.

‘ಸೈನದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಕೆಲಸ ಕೈಬಿಡಬೇಕು. ಕಾಯಂ ಉದ್ಯೋಗ ನೀಡಬೇಕು. ಅಗ್ನಿಪಥ ಯುವಕರ ಬದುಕಿನ ಹಾದಿ ತಪ್ಪಿಸುವ ಯೋಜನೆಯಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಸೈನ್ಯದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಅಗ್ನಿಪಥ ಯೋಜನೆ ಪ್ರಕಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಯುವಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ದೇಶದಲ್ಲಿ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವುದಾಗಿ ಹೇಳಿ ಏನೂ ಕ್ರಮ ಕೈಗೊಂಡಿಲ್ಲ. ಈಗ ದಿಢೀರನೇ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಹೇಳಿ ಮುಂಬರುವ ಚುನಾವಣೆಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ‘ ಎಂದು ಆರೋಪಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ವಂಕಲಕುಂಟಿ, ಕಾರ್ಯದರ್ಶಿ ಶರಣಬಸವ ಪಾಟೀಲ, ಸಂಚಾಲಕ ಗಂಗರಾಜ, ದುರ್ಗೇಶ, ಶರಣಗಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.