ADVERTISEMENT

ಅರ್ಚಕರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 11:19 IST
Last Updated 27 ಜನವರಿ 2020, 11:19 IST
ಕಾರಟಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಆರ್‌.ಕವಿತಾ ಅವರಿಗೆ ಮನವಿ ಸಲ್ಲಿಸಿತು
ಕಾರಟಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಆರ್‌.ಕವಿತಾ ಅವರಿಗೆ ಮನವಿ ಸಲ್ಲಿಸಿತು   

ಕಾರಟಗಿ: ಜಿಲ್ಲಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿ, ಸಂವಿಧಾನದ ಆಶಯಗಳಿಗೆ ಧಕ್ಕೆ ತಂದಿರುವ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ತಹಶೀಲ್ದಾರ್‌ ಆರ್‌. ಕವಿತಾ ಅವರಿಗೆ ಮನವಿ ಸಲ್ಲಿಸಿತು.

ಸಂಘದ ಅಧ್ಯಕ್ಷ ಸರ್ದಾರ ಅಲಿ ಮಾತನಾಡಿ,‘ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ವಿಚಾರದಲ್ಲಿ ರಾಜಕೀಯ ನುಸುಳಿ ವಿಷಯ ಜಟಿಲಗೊಂಡಿದೆ. ಜಿಲ್ಲಾಧಿಕಾರಿಗಳು ನ್ಯಾಯಾಲಯದ ಆದೇಶದಂತೆ ಸಂವಿಧಾನಬದ್ಧವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಅರ್ಚಕ ವಿದ್ಯಾದಾಸ್ ಬಾಬಾ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದರು.

ಘಟನೆಗಳಿಂದ ಪ್ರಾಮಾಣಿ ಅಧಿಕಾರಿಗಳಿಗಳಿಗೆ ಮಾನಸಿಕ ಹಿಂಸೆಯಾಗುತ್ತದೆ. ಇಂಥಹ ಘಟನೆಗಳು ಪುನರಾವರ್ತನೆಯಾಗದಿರಲು ಅರ್ಚಕರ ವಿರುದ್ದ ಕಠಿಣ ಕ್ರಮ ಅಗತ್ಯ ಎಂದು ಎಂದರು.

ADVERTISEMENT

ಕ್ರೀಡಾ ಕಾರ್ಯದರ್ಶಿ ವೀರನಗೌಡ, ನಿರ್ದೇಶಕ ಶ್ಯಾಮಸುಂದರ್, ಸಿದ್ಧನಗೌಡ, ತಿಮಣ್ಣ ನಾಯಕ, ರಮೇಶ, ಬಸವರಾಜ ಮ್ಯಾಗಳಮನಿ, ಕಂದಾಯ ನಿರೀಕ್ಷಕ ಸುರೇಶ ಹಂದ್ರಾಳ, ಶ್ರೀಕಾಂತ, ರಮೇಶ, ವಿಠ್ಠಲ್ ಹಾಗೂ ಅಲಿಹುಸೇನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.