ADVERTISEMENT

‘ಡೆಂಗಿ ಜ್ವರ ಉದಾಸೀನದಿಂದ ತೊಂದರೆ’

ಡೆಂಗಿ ಜ್ವರ: ಜಾಗೃತಿ, ನಿಯಂತ್ರಣ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:35 IST
Last Updated 6 ಜೂನ್ 2025, 14:35 IST
ಯಲಬುರ್ಗಾ ತಾಲ್ಲೂಕು ಬಳೂಟಗಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಡೆಂಗಿ ಕಾಯಿಲೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಮಾತನಾಡಿದರು
ಯಲಬುರ್ಗಾ ತಾಲ್ಲೂಕು ಬಳೂಟಗಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಡೆಂಗಿ ಕಾಯಿಲೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಮಾತನಾಡಿದರು   

ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಡೆಂಗಿ ಜ್ವರ ಕುರಿತ ಜಾಗೃತಿ ಹಾಗೂ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನೇತೃತ್ವ ವಹಿಸಿದ್ದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಮಾತನಾಡಿ, ‘ಡೆಂಗಿ ಒಂದು ಮಾರಕ ರೋಗವಾಗಿದ್ದು, ಉದಾಸೀನ ಮಾಡಿದರೆ ತೊಂದರೆಗೆ ಒಳಗಾಗಬೇಕಾಗುತ್ತದೆ. ಕಾರಣ ವಾಸಿಸುವ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತ್ವರಿತವಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಮುಖ್ಯವಾಗಿದೆ’ ಎಂದರು.

‘ಸಂಜೆ ಸಮಯದಲ್ಲಿ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳುವುದು, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಲಾರ್ವಾ ನಾಶಕ್ಕಾಗಿ ಸ್ವಚ್ಛಗೊಳಿಸುವುದು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಸಲಹೆ ಸೂಚನೆಗಳನ್ನು ಪಾಲಿಸುವುದು ಅವಶ್ಯಕ’ ಎಂದರು.

ADVERTISEMENT

ಮಲೇರಿಯಾ ತಾಂತ್ರಿಕ ಮೇಲ್ವಿಚಾರಕ ಮಂಜುನಾಥ ಮಾತನಾಡಿ, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ನಿಯಂತ್ರಣ, ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಕೋವಿಡ್-19 ಖಾಯಿಲೆ ಕುರಿತು ಮಾತನಾಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಜೇಶ್ವರಿ ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿರ್ಮೂಲನೆ ಹಾಗೂ ಹದಿ-ಹರಯದವರ ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ಪರಸಪ್ಪ ಶಾಡ್ಲಗೇರಿ, ಫಾರ್ಮಸಿ ಅಧಿಕಾರಿಗಳಾದ ವಿಶ್ವಾರಾಧ್ಯ, ಸಹ-ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.