ಕೊಪ್ಪಳ: ಭಾರತೀಯ ರೆಡ್ ಕ್ರಾಸ್ ವತಿಯಿಂದ ಇಲ್ಲಿನ ಮಹಾವೀರ ಸಮುದಾಯ ಭವನದಲ್ಲಿ ಆ. 30ರಿಂದ ಮೂರು ದಿನಗಳ ಕಾಲ ಕಲಬುರಗಿ ವಿಭಾಗಮಟ್ಟದ ಯುವ ರೆಡ್ ಕ್ರಾಸ್ ಕಾರ್ಯಾಗಾರ ನಡೆಯಲಿದೆ.
30ರಂದು ಬೆಳಿಗ್ಗೆ 11ಗಂಟೆಗೆ ಮುಖ್ಯಮಂತ್ರಿ ಆರ್ಥಿಕ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಕಾರ್ಯಾಗಾರ ಉದ್ಘಾಟಿಸುವರು. ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಸಭಾಪತಿ ಸೋಮರಡ್ಡಿ ಅಳವಂಡಿ ವಹಿಸುವರು.
ಮುಖ್ಯಅತಿಥಿಗಳಾಗಿ ಸಂಸ್ಥೆಯ ರಾಜ್ಯ ಶಾಖೆಯ ಸಭಾಪತಿ ವಿಜಯಕುಮಾರ ಪಾಟೀಲ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾದ ರಾಘವೇಂದ್ರ ಹಿಟ್ನಾಳ, ಗಾಲಿ ಜನಾರ್ದನರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ವಿ.ವಿ. ಕುಲಪತಿ ಬಿ.ಕೆ. ರವಿ ಸೇರಿದಂತೆ ಅನೇಕರು ಪಾಲ್ಗೊಳ್ಳುವರು.
ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನಡೆಯಲಿದೆ. ಕಲಬುರಗಿ ವಿಭಾಗದ ವ್ಯಾಪ್ತಿಯ ಎಲ್ಲ ಏಳು ಜಿಲ್ಲೆಗಳ ಆಯ್ದು ವಿದ್ಯಾರ್ಥಿಗಳ ಹಾಗೂ ವಿ.ವಿ. ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಮಾನವೀಯತೆಗಾಗಿ ನಡಿಗೆ: ವಿಶ್ವಶಾಂತಿ ದಿನದ ಅಂಗವಾಗಿ ಆ. 30ರಂದು ಬೆಳಿಗ್ಗೆ 9 ಗಂಟೆಗೆ ತಾಲ್ಲೂಕು ಕ್ರೀಡಾಂಗಣದಿಂದ ಮಹಾವೀರ ಕಲ್ಯಾಣ ಮಂಟಪದ ತನಕ ಮಾನವೀಯತೆಗಾಗಿ ನಡಿಗೆ ನಡೆಯಲಿದ್ದು, ಜಿಲ್ಲಾಧಿಕಾರಿ ನಲಿನ್ ಅತುಲ್ ಚಾಲನೆ ನೀಡಲಿದ್ದಾರೆ ಎಂದು ರೆಡ್ ಕ್ರಾಸ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ತಿಳಿಸಿದ್ದಾರೆ.
ಮೂರು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಕುರಿತು ಉಪನ್ಯಾಸ ನಡೆಯಲಿದ್ದು ಮಾನವೀಯತೆಗಾಗಿ ನಡಿಗೆ ಕಾರ್ಯಕ್ರಮವೂ ಆಯೋಜನೆ ಮಾಡಿದ್ದೇವೆ.ಡಾ. ಶ್ರೀನಿವಾಸ ಹ್ಯಾಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.