ADVERTISEMENT

ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯಕ್ಕೆ ಚಾಲನೆ 

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2025, 14:10 IST
Last Updated 7 ಫೆಬ್ರುವರಿ 2025, 14:10 IST
ಯಲಬುರ್ಗಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಪ್ರಯೋಗಾಲಯಕ್ಕೆ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಚಾಲನೆ ನೀಡಿದರು 
ಯಲಬುರ್ಗಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಪ್ರಯೋಗಾಲಯಕ್ಕೆ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಚಾಲನೆ ನೀಡಿದರು    

ಯಲಬುರ್ಗಾ: ಸ್ಥಳೀಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಿಸಿದ ಪ್ರಯೋಗಾಲಯಕ್ಕೆ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಸಾರ್ವಜನಿಕ ಆರೋಗ್ಯ ಸುಧಾರಣೆಗೆ ಸರ್ಕಾರದ ಯೋಜನೆಗಳು ಸರಿಯಾಗಿ ಸಾರ್ವಜನಿಕರಿಗೆ ತಪುಪಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆರೋಗ್ಯ ಕೇಂದ್ರಗಳನ್ನು ತರೆಯಲು ಕಾರಣರಾಗಿದ್ದಾರೆ. ಹಾಗೆಯೇ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಪ್ರತಿಯೊಂದು ಕೇಂದ್ರಗಳಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ’ ಎಂದರು.

ಆರೊಗ್ಯ ರಕ್ಷಾ ಸಮಿತಿಯ ಉಪಾಧ್ಯಕ್ಷ ಡಾ.ಶಿವನಗೌಡ ದಾನರಡ್ಡಿ ಮಾತನಾಡಿದರು.

ADVERTISEMENT

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ್, ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೃಷ್ಣ ಹೊಟ್ಟಿ, ಆರೋಗ್ಯ ಅಧಿಕಾರಿ ಡಾ. ಅಮರೇಶ್ ನಾಗರಾಳ, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿ, ಜಿಲ್ಲಾ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ಮುಖಂಡ ಹಂಪಯ್ಯ ಸ್ವಾಮಿ ಹಿರೇಮಠ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಶಿಧರ್ ಉಳ್ಳಾಗಡ್ಡಿ, ವಿ.ಎಸ್. ಶಿವಪ್ಪಯ್ಯನಮಠ, ಪ್ರಕಾಶ್ ಚಲವಾದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.