ADVERTISEMENT

ಬಿಜೆಪಿ ಬಿಎಲ್‍ಎ-2 ಕಾರ್ಯಾಗಾರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 6:01 IST
Last Updated 1 ಮಾರ್ಚ್ 2026, 6:01 IST
ಯಲಬುರ್ಗಾ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಎಲ್‍ಎ-2 ಕಾರ್ಯಾಗಾರಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು
ಯಲಬುರ್ಗಾ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಎಲ್‍ಎ-2 ಕಾರ್ಯಾಗಾರಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿದರು   

ಯಲಬುರ್ಗಾ: ‘ತಾಲ್ಲೂಕಿನಲ್ಲಿ ಪಕ್ಷ ಸಂಘಟನೆ ನಿರೀಕ್ಷೆಗೂ ಮೀರಿ ಬಲಗೊಳ್ಳುತ್ತಿದ್ದು, ಪಕ್ಷದ ತತ್ವ ಸಿದ್ಧಾಂತ ಮೆಚ್ಚಿಕೊಂಡು ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಮತ್ತೆ ಕ್ಷೇತ್ರದಲ್ಲಿ ಬಿಜೆಪಿ ವಿಜೃಂಭಿಸುವುದರಲ್ಲಿ ಸಂಶಯವಿಲ್ಲ’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಎಲ್‍ಎ-2 ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೊಳ್ಳುವುದು ಮುಖ್ಯವಾಗಿದೆ. ಕೆಳಹಂತದಿಂದ ಪಕ್ಷದ ಸದೃಢವಾದರೆ ಮಾತ್ರ ಬಲಿಷ್ಠವಾಗುತ್ತದೆ. ಈ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರು ಸಕ್ರಿಯರಾಗಬೇಕಾಗಿದೆ. ಪಕ್ಷ ಸಂಘಟನೆಗೊಂಡರೆ ಮಾತ್ರ ಪ್ರತಿಯೊಂದು ಚುನಾವಣೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ’ ಎಂದು ಹೇಳಿದರು.

‘ಸಂಘಟನೆ ಕಾರ್ಯದಲ್ಲಿ ಮುಖ್ಯವಾಗಿ ಮತದಾರರ ಪಟ್ಟಿಸಮಗ್ರ ಪರಿಶೀಲನೆ, ಹೊಸ ಮತದಾರರ ನೋಂದಣಿ, ಬಿಜೆಪಿ ನೇತೃತ್ವದ ಸರ್ಕಾರದ ಸಾಧನೆಗಳ ಕುರಿತು ಪ್ರಚಾರ ಹಾಗೂ ಸದ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಗೆ ಮಾಡಬೇಕಾಗಿದೆ. ಮುಖ್ಯವಾಗಿ ಆಗಾಗ ಜನಸಂಪರ್ಕ ಸಭೆ ಆಯೋಜಿಸಿ, ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ’ ಎಂದು ಹೇಳಿದರು.

ADVERTISEMENT

ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ ಮಾತನಾಡಿ, ‘ಕಾರ್ಯಕರ್ತರ ಪರಿಶ್ರಮಕ್ಕೆ ತಕ್ಕಂತೆ ಪ್ರತಿಫಲ ನೀಡುವ ಬಿಜೆಪಿಯಲ್ಲಿ ಗುರುತಿಸಿಕೊಳ್ಳುವ ಪ್ರತಿಯೊಬ್ಬರಿಗೆ ಒಂದಲ್ಲ, ಒಂದು ದಿನ ಉನ್ನತ ಸ್ಥಾನಮಾನ ಕಲ್ಪಿಸಿಕೊಡುತ್ತದೆ. ಬಿಎಲ್‍ಎ-2 ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ, ಬೂತ್ ಮಟ್ಟದಲ್ಲಿ ಪಕ್ಷ ಬಲಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ’ ಎಂದು ಹೇಳಿದರು.

ರಾಜ್ಯ ಕಾರ್ಯಕಾರಣಿ ಸದಸ್ಯ ಬಸವರಾಜ ರಾಜೂರು ಮಾತನಾಡಿ, ‘ಸಂಘಟನೆಯಲ್ಲಿ ಶಿಸ್ತು, ಸಮಯಪಾಲನೆ, ಕಾರ್ಯಕರ್ತರ ನಡುವೆ ಸಮನ್ವಯತೆ ಬಹುಮುಖ್ಯವಾದ ಅಂಶಗಳಾಗಿರುವುದರಿಂದ ಇವುಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ ಎಂಬುದನ್ನು ಪ್ರತಿಯೊಬ್ಬರೂ ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ನುಡಿದರು.

ಬಿಜೆಪಿ ಮುಖಂಡರಾದ ಸಂತೋಷ ರಾಜಗುರು ಮತ್ತು ಸುನೀಲ ಹೆಸರೂರು, ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಶಿವಶಂಕರರಾವ ದೇಸಾಯಿ, ಶರಣಪ್ಪ ಈಳಿಗೇರ, ಶಿವಕುಮಾರ ನಾಗಲಾಪುರಮಠ, ಶಿವಲೀಲಾ ದಳವಾಯಿ, ಸಂತೋಷಿಮಾ ಜೋಶಿ, ಶಿವಪ್ಪ ವಾದಿ, ಶರಣಪ್ಪ ಬಣ್ಣದಭಾವಿ, ಮಂಜುನಾಥ ನಾಡಗೌಡ್ರ, ಫಕೀರಪ್ಪ ತಳವಾರ, ಅಯ್ಯನಗೌಡ ಕೆಂಚಮ್ಮನವರ, ಅಮರೇಶ ಹುಬ್ಬಳ್ಳಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.