ಕೊಪ್ಪಳ: ‘ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಜೂ.26 ರಂದು 2015 ರಿಂದ 2020 ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಪ್ತಿ ಮಾಡಲಾದ ಮಾದಕ ವಸ್ತುಗಳನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ವತಿಯಿಂದ ವಿಲೇವಾರಿ ಮಾಡಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 14 ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಸುಮಾರು 259 ಕೆ.ಜಿ, 761 ಗ್ರಾಂ Wet and Raw Cannabis Plants and Ganja and 5 ಮತ್ತುDry Poppy Straw ಅನ್ನು ಜಪ್ತಿ ಮಾಡಿ ಜಿಲ್ಲಾ ಪೊಲೀಸ್ ಕಚೇರಿಯ ಮಾದಕ ವಸ್ತು ಸಂಗ್ರಹ ಕೊಠಡಿಯಲ್ಲಿ ಸಂಗ್ರಹ ಮಾಡಲಾಗಿತ್ತು.
ಸಂಗ್ರಹಿಸಿದ ಮಾದಕ ವಸ್ತುವನ್ನು ಜೂ.26 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಠಾಣಾ ವ್ಯಾಪ್ತಿಯ ಹಳೇಕುಮಟ ಗ್ರಾಮದ ಹತ್ತಿರದ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿಯಮಾನುಸಾರ ವಿಲೇವಾರಿ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.