ADVERTISEMENT

ವರ್ಷದೊಳಗೆ ಹೊಸ ಪೊಲೀಸ್‌ ಕಚೇರಿ: ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 4:28 IST
Last Updated 24 ಜನವರಿ 2022, 4:28 IST
ಕುಷ್ಟಗಿಯಲ್ಲಿ ಪೊಲೀಸ್‌ ಕಚೇರಿಯ ತಾತ್ಕಾಲಿಕ ಕಟ್ಟಡವನ್ನು ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಉದ್ಘಾಟಿಸಿದರು
ಕುಷ್ಟಗಿಯಲ್ಲಿ ಪೊಲೀಸ್‌ ಕಚೇರಿಯ ತಾತ್ಕಾಲಿಕ ಕಟ್ಟಡವನ್ನು ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಉದ್ಘಾಟಿಸಿದರು   

ಕುಷ್ಟಗಿ: ‘ಪಟ್ಟಣದಲ್ಲಿ ಹೊಸ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಂಡ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ಗಂಗಾವತಿ ಉಪ ವಿಭಾಗದ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು.

ಭಾನುವಾರ ಇಲ್ಲಿ ಹೊಸ ಕಟ್ಟಡ ನಿರ್ಮಾಣಗೊ ಳ್ಳಲಿರುವುದರಿಂದ ತಾತ್ಕಾಲಿಕ ಸಿಪಿಐ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದ ಅವರು,‘ಹೊಸ ಕಟ್ಟಡ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಪೊಲೀಸ್‌ ಠಾಣೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಹಾಗೂ ಸಭಾಂಗಣಗಳನ್ನು ಒಳಗೊಳ್ಳಲಿದೆ. ಇದರಿಂದ ಎಲ್ಲ ಸಿಬ್ಬಂದಿ ಒಂದೇ ಕಡೆ ಕಾರ್ಯನಿರ್ವಹಿಸುವುದಕ್ಕೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.

ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ತಾತ್ಕಾಲಿಕ ಕಟ್ಟಡ ಉದ್ಘಾಟಿಸಿದರು.

ADVERTISEMENT

ಸರ್ಕಲ್‌ ಇನ್‌ಸ್ಪೆಕ್ಟರ್ ಎನ್‌.ಆರ್‌.ನಿಂಗಪ್ಪ, ಸಬ್‌ ಇನ್‌ಸ್ಪೆಕ್ಟರ್ ತಿಮ್ಮಣ್ಣ ನಾಯಕ, ವೈಶಾಲಿ ಝಳಕಿ ಮತ್ತು ಪೊಲೀಸ್‌ ಸಿಬ್ಬಂದಿ, ಪುರಸಭೆಯ ಅನೇಕ ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿಪಾಲ್ಗೊಂಡಿದ್ದರು.

ಪ್ರಾರಂಭದಲ್ಲಿ ಹೊಸ ಕಟ್ಟಡದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿ–ವಿಧಾನಗಳು ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.