ADVERTISEMENT

ಮೌಲ್ಯಾಧಾರಿತ ಶಿಕ್ಷಣ ನೀಡಿ

ವಾರ್ಷಿಕೋತ್ಸವ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 11:04 IST
Last Updated 10 ಫೆಬ್ರುವರಿ 2020, 11:04 IST
ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿ ಇರುವ ಎಜುಕೇರ್ ಇಂಗ್ಲಿಷ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಉದ್ಘಾಟಿಸಿದರು
ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿ ಇರುವ ಎಜುಕೇರ್ ಇಂಗ್ಲಿಷ ಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಉದ್ಘಾಟಿಸಿದರು   

ಕೊಪ್ಪಳ: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅಂಕಗಳನ್ನು ಬೆನ್ನಟ್ಟಿ ಶಿಕ್ಷಣ ನೀಡಲಾಗುತ್ತಿದ್ದು, ಇದರಿಂದ ನಿಜವಾಗಿಯೂ ಶಿಕ್ಷಣ ಗುಣಮಟ್ಟ ಕುಸಿಯುತ್ತದೆ ಎನ್ನುವ ಆತಂಕ ಎದುರಾಗುತ್ತಿದೆ. ಹಾಗಾಗಿ ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಹೇಳಿದರು.

ನಗರದ ಕಿನ್ನಾಳ ರಸ್ತೆಯಲ್ಲಿ ಇರುವ ಎಜುಕೇರ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಈಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವರ್ಧಾತ್ಮಕ ಯುಗದಲ್ಲಿ ಅಂಕಗಳು ಬೇಕೇಬೇಕು. ಆದರೆ ಅದು ಪ್ರಧಾನ ವಾಗುವುದರಿಂದ ಮಕ್ಕಳಲ್ಲಿ ಇರುವ ಪ್ರತಿಭೆ ಕಮರಿ ಹೋಗಬಹುದು. ಆದ್ದರಿಂದ ಮಕ್ಕಳು ಮುಕ್ತ ಮನಸ್ಸಿನಿಂದ ಕಲಿಯುವಂತೆ ಆಗಬೇಕೆ ವಿನಃ ಒತ್ತಾಯ ಪೂರ್ವಕ ಕಲಿಕೆಯಾಗಬಾರದು. ಮಕ್ಕಳಲ್ಲಿ ಪ್ರತಿಭೆ ಇದ್ದೇ ಇರುತ್ತದೆ. ಆದರೆ, ಹೆಚ್ಚು ಅಂಕಗಗಳನ್ನು ಬೆನ್ನಟ್ಟುವ ಭರದಲ್ಲಿ ಪ್ರತಿಭೆ ಬಾಡಿ ಹೋಗಬಾರದು. ಹೀಗಾಗಿ, ಶಿಕ್ಷಣ ಸಂಸ್ಥೆಗಳ ಹೆಚ್ಚು ಅಂಕ ಪಡೆಯುವುದಕ್ಕೆ ನೀಡುವಷ್ಟು ಪ್ರಾಮುಖ್ಯತೆಯನ್ನು ಮೌಲ್ಯಾಧಾರಿತ ಶಿಕ್ಷಣ ನೀಡುವುದಕ್ಕೂ ನೀಡಬೇಕು ಎಂದರು.

ADVERTISEMENT

ಅನುದಾನರಹಿತ ಶಾಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಲ್ಹಾದ್‌ ಅಗಳಿ ಮಾತನಾಡಿ, ಮಕ್ಕಳ ಉತ್ತಮ ಶಿಕ್ಷಣಕ್ಕೆ ಕೇವಲ ಶಾಲೆಯಲ್ಲಿ ಮಾಡುವ ಪಾಠ ಸಾಲದು. ಮನೆಯಲ್ಲಿ ಸೂಕ್ತ ವಾತಾವರಣ ಕಲ್ಪಿಸಬೇಕು. ಮಕ್ಕಳಿಗೆ ಪ್ರೋತ್ಸಾಹ ಸಿಕ್ಕಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ಎಜುಕೇರ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀನಿವಾಸ ಹ್ಯಾಟಿ ಮಾತನಾಡಿ, ಮಕ್ಕಳ ಶಿಕ್ಷಣ ಮಟ್ಟ ಸುಧಾರಣೆಗೆ ಶಿಕ್ಷಕರ ಜತೆ ಪಾಲಕರು ಕೈಜೋಡಿಸಬೇಕು.ಎಜುಕೇರ್‌ ಆಂಗ್ಲಮಾಧ್ಯಮ ಶಾಲೆ ಉತ್ತಮ ಬೆಳವಣಿಗೆ ಕಾಣುತ್ತಿದೆ ಎಂದರು.

ಕಾಯಕ ಎಜುಕೇಶನ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಾ ಪಾಟೀಲ, ಖಜಾಂಚಿ ಶುಶಾಂಗಿ ಅವರಾದಿ ಇದ್ದರು.

ಗಿರೀಜಾಪತಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕಿರಾದ ಪ್ರೇಮಾ ಪಟ್ಟಣಶೆಟ್ಟಿ, ಸವಿತಾ ನಿರೂಪಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.