ADVERTISEMENT

ಋತುಚಕ್ರ ನೈರ್ಮಲ್ಯ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 12:02 IST
Last Updated 3 ಜೂನ್ 2020, 12:02 IST
ಗಂಗಾವತಿ ತಾಲ್ಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಮಂಗಳವಾರ ನಡೆದ ಮಹಿಳಾ ಕೂಲಿಕಾರರಿಗೆ ಸುರಕ್ಷಿತ ಋತುಚಕ್ರ ನಿರ್ವಹಣೆ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿದ್ದರು
ಗಂಗಾವತಿ ತಾಲ್ಲೂಕಿನ ಬಸಾಪಟ್ಟಣ ಗ್ರಾಮದಲ್ಲಿ ಮಂಗಳವಾರ ನಡೆದ ಮಹಿಳಾ ಕೂಲಿಕಾರರಿಗೆ ಸುರಕ್ಷಿತ ಋತುಚಕ್ರ ನಿರ್ವಹಣೆ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿದ್ದರು   

ಗಂಗಾವತಿ: ಮಹಿಳೆಯರಲ್ಲಿ ಋತುಚಕ್ರವು ಸಹಜ ಪ್ರಕ್ರಿಯೆ. ಅದಿಲ್ಲದೇ ಮಾನವ ಸಂತತಿ ಮುಂದುವರೆಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಸ್ವಚ್ಛ‌ ಭಾರತ್ ಮಿಷನ್‌ ಗ್ರಾಮೀಣ ಸಲಹೆಗಾರ್ತಿ ಬಸಮ್ಮ ಹೇಳಿದರು.

ತಾಲ್ಲೂಕಿನ ಬಸಾಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಮಹಿಳಾ ಕೂಲಿಕಾರರಿಗೆ ಸುರಕ್ಷಿತ ಋತುಚಕ್ರ ನಿರ್ವಹಣೆ ಬಗ್ಗೆ ಅವರು ಮಾಹಿತಿ ನೀಡಿದರು.

ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮುಟ್ಟಿನ ನೈರ್ಮಲ್ಯ ನಿರ್ವಹಣೆಯಲ್ಲಿ ಇಂದಿಗೂ ಹಳೆಯ ಕ್ರಮಗಳನ್ನೇ ಅನುಸರಿಸುತ್ತಿದ್ದು, ಅನೇಕ ರೀತಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಮೌಢ್ಯಗಳನ್ನು ದೂರ ಮಾಡುವುದರೊಂದಿಗೆ ಮಹಿಳೆಯರನ್ನು ಮಾನಸಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ಈ ವಿಶ್ವ ಋತುಚಕ್ರ ನೈರ್ಮಲ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್‌, ಗ್ರಾಮ ಪಂಚಾಯಿತಿ ಪಿಡಿಒ ಇಂದಿರಾ ಹಾಗೂ ಕೂಲಿಕಾರ ಮಹಿಳೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.