ADVERTISEMENT

‘ಶಿಕ್ಷಣ ನೀತಿ ಜಾರಿ: ತರಾತುರಿ ಸಲ್ಲ’

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 5:21 IST
Last Updated 16 ಸೆಪ್ಟೆಂಬರ್ 2021, 5:21 IST
ಅಲ್ಲಮಪ್ರಭು ಬೆಟ್ಟದೂರ
ಅಲ್ಲಮಪ್ರಭು ಬೆಟ್ಟದೂರ   

ಕೊಪ್ಪಳ: ಅತ್ಯಂತ ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಹೆಸರಾಂತ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಮುಖ್ಯಮಂತ್ರಿಗಳಿಗೆ, ರಾಜ್ಯದ ಎಲ್ಲ ಶಾಸಕರುಹಾಗೂವಿಧಾನ ಪರಿಷತ್‌ ಸದಸ್ಯರಿಗೆಬಹಿರಂಗ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರ ಈ ಕೋವಿಡ್ ಸಂದರ್ಭದಲ್ಲಿ ಯಾವುದೇ ಪ್ರಜಾತಾಂತ್ರಿಕ ಚರ್ಚೆಗಳಿಲ್ಲದೆ ಏಕಪಕ್ಷೀಯವಾಗಿ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪದವಿ ಹಂತದಲ್ಲಿ ತರಲು ನಿರ್ಧರಿಸಿದೆ. ಶಿಕ್ಷಣ ಪ್ರೇಮಿಗಳು ಹಾಗೂ ಶಿಕ್ಷಣ ತಜ್ಞರು ರಾಜ್ಯ ಸರ್ಕಾರದ ಈ ಸರ್ವಾಧಿಕಾರಿ ಧೋರಣೆ ವಿರೋಧಿಸುತ್ತಲೇ ಬಂದಿದ್ದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದುಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಹಾಗೂ ಇತರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಬ್ಬಶಾಸಕರು ಬಡ ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಇದ್ದಲ್ಲಿ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ವಿರೋಧಿಸಬೇಕು’ ಎಂದುಸಮಿತಿರಾಜ್ಯ ಸೆಕ್ರೆಟರಿಯಟ್ ಸದಸ್ಯಆರ್.ಕೆ.ವೀರಭದ್ರಪ್ಪ ಒತ್ತಾಯಿಸಿದ್ದಾರೆ.

ADVERTISEMENT

ಶಿಕ್ಷಣ ನೀತಿ-2020 ಅನುಷ್ಠಾನಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಕೂಡಲೇ ಕೈಬಿಡಬೇಕು.

ಪಠ್ಯ ಶಾಸ್ತ್ರ, ಕಲಿಕೆ, ಬೋಧನೆ ಹಾಗೂ ಜ್ಞಾನಾರ್ಜನೆಗೆ ಮಾರಕವಾಗಿರುವ 3/4 ಪದವಿ ಕೋರ್ಸ್‌ಗಳನ್ನು ರದ್ದುಗೊಳಿಸಬೇಕು ಎಂದು ಅವರು ಈ ವೇಳೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.