ADVERTISEMENT

ಅಳವಂಡಿ: ನಾಯಿ ಕಡಿದು ಎಂಟು ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 6:59 IST
Last Updated 22 ಡಿಸೆಂಬರ್ 2023, 6:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಅಳವಂಡಿ: ಅಳವಂಡಿ ಗ್ರಾಮದಲ್ಲಿ ಶುಕ್ರವಾರ ನಾಯಿಯೊಂದು ಕಚ್ಚಿ ಎಂಟು ಜನ ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ನಾಯಿ ಕಡಿತದಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು, ವೃದ್ಧರು, ಮ‌ಹಿಳೆ ಸೇರಿದಂತೆ ಯುವಕರಿಗೆ ನಾಯಿ ಕಡಿದಿದ್ದು, ಗಾಯಾಳುಗಳಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ.

ADVERTISEMENT

ಗಾಯಾಳುಗಳಿಗೆ ಅಳವಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ತದನಂತರ 7 ಜನರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮಕ್ಕಳನ್ನು ಹೊರಗಡೆ ಕಳುಹಿಸಬೇಡಿ ಹಾಗೂ ಹೊರಗೆ ಬಂದವರು ಎಚ್ಚರದಿಂದ ಇರಬೇಕು ಎಂದು ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.