ADVERTISEMENT

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ: ಅಜಯ್ ಸಿಂಗ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 6:38 IST
Last Updated 23 ಅಕ್ಟೋಬರ್ 2024, 6:38 IST
<div class="paragraphs"><p>ಅಜಯ್ ಸಿಂಗ್</p></div>

ಅಜಯ್ ಸಿಂಗ್

   

ಕೊಪ್ಪಳ: ಮುಡಾ ಹಗರಣದಲ್ಲಿ ವಿನಾಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಎಳೆದು ತರಲಾಗುತ್ತಿದ್ದು, ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿಯೇ ರಾಜ್ಯದ ಉಪಚುನಾವಣೆ ಎದುರಿಸುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿ ಅಧ್ಯಕ್ಷರೂ ಆದ ಶಾಸಕ ಡಾ. ಅಜಯ್ ಸಿಂಗ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿಕೊಳ್ಳುವ ಯಾರನ್ನೇ ಅದರೂ ಸ್ವಾಗತ ಮಾಡುತ್ತೇವೆ. ಸಿ.ಪಿ. ಯೋಗೇಶ್ವರ್ ನಮ್ಮ ಪಕ್ಷಕ್ಕೆ ಸೇರಿದ್ದರಿಂದ ಮೈತ್ರಿ ಪಕ್ಷಗಳಿಗೆ ಆಘಾತವಾಗಿದೆ ಎಂದರು.

ನಮ್ಮ ಪಕ್ಷದ ತತ್ವ ಹಾಗೂ ಸಿದ್ದಾಂತ ಮೆಚ್ಚಿಕೊಂಡು ಅನೇಕರು ಪಕ್ಷಕ್ಕೆ ಬರುತ್ತಿರುವುದನ್ನು ನೋಡಿದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎನ್ನುವುದು ಗೊತ್ತಾಗುತ್ತದೆ. ಕುಟುಂಬ ರಾಜಕಾರಣದ ಆಚೆಗೂ ಎಲ್ಲರಿಗೂ ನಮ್ಮ ಪಕ್ಷ ಅವಕಾಶ ಕೊಡುತ್ತದೆ ಎನ್ನುವುದು ಇದರಿಂದ ತಿಳಿಯುತ್ತದೆ ಎಂದು ಹೇಳಿದರು‌.

ಸಿದ್ದರಾಮಯ್ಯ ಎಂದರೆ‌ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಭಯವಿದ್ದು, ಹೇಗಾದರೂ ಮಾಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮೈತ್ರಿ ಪಕ್ಷಗಳು ಕುತಂತ್ರ ಮಾಡುತ್ತಿವೆ ಎಂದು ಆರೋಪಿಸಿದರು. ಸಿ.ಎಂ. ಈಗಲೂ ಪ್ರಶ್ನಾತೀತ ನಾಯಕ ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.