ADVERTISEMENT

ಆರೋಗ್ಯ ಕ್ಷೇತ್ರ ಸುಧಾರಣೆಗೆ ಒತ್ತು: ಶಾಸಕ ಹಿಟ್ನಾಳ್‌

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 15:34 IST
Last Updated 6 ಸೆಪ್ಟೆಂಬರ್ 2024, 15:34 IST
ಕೊಪ್ಪಳ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು
ಕೊಪ್ಪಳ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು   

ಕೊಪ್ಪಳ: ‘ಕ್ಷೇತ್ರದ ಸಾಮಾನ್ಯ ಮನುಷ್ಯನಿಗೂ ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಚಿಕಿತ್ಸೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.

ತಾಲ್ಲೂಕಿನ ಗಿಣಿಗೇರಾ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗಬ್ಬೂರು, ಗುಳದಳ್ಳಿ ಮತ್ತು ಕೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡ ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ‘ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಕ್ಷೇತ್ರಕ್ಕೆ ಅನುದಾನ ತಂದಿದ್ದೇನೆ. ನಮ್ಮ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರಕ್ಕೆ ಈಗಾಗಲೇ ಅನೇಕ ಬಾರಿ ಮನವಿ ಮಾಡಿದ್ದೇನೆ’ ಎಂದರು.

ಪ್ರತಿಯೊಬ್ಬರಿಗೂ ಸೂರು: ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಲಕ್ಷಾಂತರ ಬಡಜನರಿಗೆ ಸೂರು ಒದಗಿಸುವ ಕೆಲಸ ಮಾಡಿದೆ. ಕೊಪ್ಪಳ ಕ್ಷೇತ್ರದಲ್ಲಿ ಪ್ರಸ್ತಕ್ತ ವರ್ಷದಲ್ಲಿ 45 ಮನೆಗಳನ್ನು ನೀಡಲಾಗಿದೆ’ ಎಂದರು.

ADVERTISEMENT

ಪಕ್ಷದ ಮುಖಂಡ ಗೂಳಪ್ಪ ಹಲಿಗೇರಿ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಬಾಲಚಂದ್ರನ್, ಗುಳದಳ್ಳಿ ಗ್ರಾ ಪಂ. ಅಧ್ಯಕ್ಷೆ ಈರಮ್ಮ ಲಕ್ಷ್ಮಣ್ ಕಿಡದಾಳ, ಅಲಿಸಾಬ್, ಅಣ್ಣಪ್ಪ ಗಬ್ಬೂರು, ಗುಡದಪ್ಪ ಗುಡದಳ್ಳಿ, ಲಕ್ಷ್ಮಣ್ ಗುಡದಳ್ಳಿ, ರಮೇಶ ಹೊಳೆಯಾಚಿ, ಪರಸಪ್ಪ ಕೆರೆಹಳ್ಳಿ, ಸುರೇಶ್ ಕೆರೆಹಳ್ಳಿ, ಸೋಮಲಿಂಗಪ್ಪ ಹುಡೇದ, ಕರಿಯಪ್ಪ ಕಂಬಳಿ, ತಾ.ಪಂ. ಇಒ ದುಂಡಪ್ಪ ತುರಾದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.