ADVERTISEMENT

‘ಗುತ್ತಿಗೆ ನೌಕರರ ಕಾಯಂಗೆ ಹೊಸ ಹುದ್ದೆ ಸೃಷ್ಟಿ’

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 13:15 IST
Last Updated 5 ಏಪ್ರಿಲ್ 2021, 13:15 IST
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ಕುಷ್ಟಗಿ: ‘ಹೊಸ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಂಬಂಧಿಸಿದ ಹುದ್ದೆಗಳು ಇಲ್ಲದ ಕಾರಣ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತಿತ್ತು. ಬಹಳ ವರ್ಷಗಳಿಂದ ಆರ್ಥಿಕ ಸಮಸ್ಯೆಯಾಗಿ ಹೇಗೋ ಹಣ ಹೊಂದಿಸಿ ಸಂಬಳ ನೀಡುತ್ತ ಬರಲಾಗಿದೆ. ಕೆಲ ಸಮಸ್ಯೆಗಳಿಂದಾಗಿ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಎರಡು ದಿನಗಳ ಹಿಂದೆಯಷ್ಟೇ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ’ ಎಂದರು.

ಹೊಸ ಹುದ್ದೆಗಳು ಸೃಷ್ಟಿಯಾದರೂ ಸದ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತೊಂದರೆಯಾಗುವುದಿಲ್ಲ. ನೇಮಕಾತಿ ಮೂಲಕ ಅವರನ್ನೇ ಕೆಲಸದಲ್ಲಿ ಮುಂದುವರಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.