ADVERTISEMENT

‘ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ’

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:35 IST
Last Updated 6 ಜೂನ್ 2025, 14:35 IST
ಅಳವಂಡಿ ಸಮೀಪದ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಅಳವಂಡಿ ಸಮೀಪದ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು   

ಅಳವಂಡಿ: ಸಮೀಪದ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗ್ರಾಮದ ಶಾಲೆಯಿಂದ ಆರಂಭವಾದ ಆಂದೋಲನದಲ್ಲಿ ಮಹಿಳೆಯರ ಕುಂಭ ಹಾಗೂ ಸರಸ್ವತಿ ಭಾವಚಿತ್ರದೊಂದಿಗೆ ಎತ್ತಿನ ಬಂಡಿಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಥಾ ಮಾಡುವ ಮೂಲಕ ಅರಿವು ಮೂಡಿಸಲಾಯಿತು.

ಮುಖ್ಯ ಶಿಕ್ಷಕ ರಾಮಚಂದ್ರಗೌಡ ಗೊಂಡಬಾಳ ಮಾತನಾಡಿ, ‘ಸರ್ಕಾರಿ ಶಾಲೆಗಳಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದರು.

ADVERTISEMENT

ಶಿಕ್ಷಕರಾದ ಕೃಷ್ಣಪ್ಪ ತಳಕಲ್, ಹನುಮಂತಪ್ಪ ಕಟಂಬ್ಲಿ, ಮಲ್ಲಪ್ಪ ಕುರಿ, ಆಶಾಬೀ ಹಡಗಲಿ, ಟಾಟಾ ಕಲಿಕಾ ಟ್ರಸ್ಟ್‌ನ ಮೃತ್ಯುಂಜಯ ಬನ್ನೂರು, ಮಂಜುನಾಥ ಕುರಿ, ಬೀರಪ್ಪ ಡೊಳ್ಳಿನ, ಸೋಮನಗೌಡ ಪಾಟೀಲ, ಅಂದಾನಯ್ಯ ಹಿರೇಮಠ, ಕರಿಯಪ್ಪ ಹಾಗೂ ಎಸ್ಡಿಎಂಸಿ ಸದಸ್ಯರು, ಶಿಕ್ಷಕರು, ಗ್ರಾಮಸ್ಥರು ಹಾಗೂ ಯುವಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.