ಕಾರಟಗಿ: ಉನ್ನತೀಕರಿಸಿದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೇಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2025- 26ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನವನ್ನು ಬುಧವಾರ ಪ್ರತ್ಯೇಕವಾಗಿ ಮಾಡಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯಗುರುಗಳು, ಸಹ ಶಿಕ್ಷಕರು ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಜಾಥಾ ನಡೆಸಿ, ಮನೆಗಳಿಗೆ ಭೇಟಿ ನೀಡಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿಸುವಂತೆ ಎಂದು ಅರಿವು ಮೂಡಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಆಂಜನೇಯ ಬೇವಿನಾಳ ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಕನಿಷ್ಠ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವ ಜೊತೆಗೆ ಸರ್ಕಾರದ ಅನೇಕ ಸೌಲಭ್ಯಗಳು ಮಕ್ಕಳಿಗೆ ದೊರೆಯುತ್ತವೆ. ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಮರಿಯಪ್ಪ, ಮುಖ್ಯೋಪಾಧ್ಯಾಯರಾದ ಬಸಯ್ಯ ಮಠ, ಶ್ಯಾಂಸುಂದರ್ ಎಂಜಿನಿ, ಶಿಕ್ಷಕರಾದ ರಾಮಪ್ಪ, ಪ್ರಮೀಳಾದೇವಿ, ಅಮರೇಶ ಮೈಲಾಪುರ, ಸುವರ್ಣಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.