ಕನಕಗಿರಿ: ರೈತರು ತಮ್ಮ ಪಹಣಿಗೆ ಆಧಾರ್ ಕಾರ್ಡ್ ನಂಬರ್ ಜೋಡಣೆ ಮಾಡದಿದ್ದರೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಬಂದ್ ಆಗಲಿವೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.
ಸಮೀಪದ ಮುಸಲಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.
ರೈತರು ಪಹಣಿಗೆ ಆಧಾರ್ ನಂಬರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ 43,710 ರೈತರ ಪೈಕಿ ಅದರಲ್ಲಿ 20,625 ರೈತರು ತಮ್ಮ ಪಹಣಿಗೆ ಆಧಾರ್ ಜೋಡಣೆ ಮಾಡಿದ್ದಾರೆ. ಉಳಿದ ರೈತರು ಸಹ ಕಡ್ಡಾಯವಾಗಿ ಜೋಡಣೆ ಮಾಡಬೇಕು’ ಎಂದರು.
‘ಆಧಾರ್ ಕಾರ್ಡ್ ಜೊತೆಗೆ ದೂರವಾಣಿ ಸಂಖ್ಯೆಯನ್ನು ಸಹ ಲಿಂಕ್ ಮಾಡಿಸಬೇಕು. ಈ ಬಗ್ಗೆ ಸಾಕಷ್ಟು ಸಲ ಮಾಹಿತಿ ನೀಡಲಾಗಿದೆ’ ಎಂದರು.
ಈ ಸಂದರ್ಭದಲ್ಲಿ ಪಿಡಿಒ ನಾಗೇಶ ಪೂಜಾರ, ಗ್ರಾಮ ಆಡಳಿತ ಅಧಿಕಾರಿ ಕುಮಾರ ಗದ್ದಿ, ಸೇರಿದಂತೆ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.