ಕುಷ್ಟಗಿ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಗಿರಿಯಪ್ಪ ಹನುಮಂತಪ್ಪ ಕುರಿ (28) ಮೃತಪಟ್ಟವರು. ಘಟನೆಗೆ ಸಂಬಂಧಿಸಿದಂತೆ ಪತ್ನಿ ಭಾರತಿ ಕುರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ವಿದ್ಯುತ್ ಪಂಪ್‌ಸೆಟ್ ಚಾಲೂ ಮಾಡಲು ಹೋಗಿದ್ದಾಗ ಸ್ಟಾರ್ಟರ್ ಪೆನಲ್‌ಬೋರ್ಡ್‌ಗೆ ವಿದ್ಯುತ್ ತಗುಲಿದ್ದು ಗಮನಕ್ಕೆ ಬಾರದೆ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ಕುರಿತ ಪ್ರಕರಣ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.