ADVERTISEMENT

ಬೆಳೆ ಪರಿಹಾರ ನೀಡುವಂತೆ ಒತ್ತಡ ಹಾಕಿ: ಶ್ರೀವಿರೂಪಾಕ್ಷೇಶ್ವರ ರೈತ ಸೇವಾ ಸಂಘ ಮನವಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:00 IST
Last Updated 23 ನವೆಂಬರ್ 2020, 16:00 IST
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ರೈತರು ಸೋಮವಾರ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ರೈತರು ಸೋಮವಾರ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು   

ಗಂಗಾವತಿ: ಕೀಟ ಬಾಧೆಯಿಂದ ಇಳುವರಿ ಬಾರದೆ ಭತ್ತ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಬೆಳೆ ಹಾನಿ ಪರಿಹಾರ ಒದಗಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ತನ್ನಿ ಎಂದು ಒತ್ತಾಯಿಸಿ ಸೋಮವಾರ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಶ್ರೀವಿರೂಪಾಕ್ಷೇಶ್ವರ ರೈತ ಸೇವಾ ಸಂಘ ಮನವಿ ಸಲ್ಲಿಸಿತು.

ರೈತ ಸಂಘದ ಅಧ್ಯಕ್ಷ ಕಳಕಪ್ಪ ಮಾತನಾಡಿ,‘ಈ ಬಾರಿ ತಾಲ್ಲೂಕಿನಾದ್ಯಂತ ಭತ್ತ ಬೆಳೆದ ರೈತರು ಕಣೆನೊಣ, ಕಾಡಿಗೆ ರೋಗಗಳಂಥ ಬಾಧೆಗಳಿಂದ ಸರಿಯಾದ ಇಳುವರಿ ಬಾರದೆ ಕಂಗಾಲಾಗಿದ್ದಾರೆ. ಹಾಗಾಗಿ ಸಂಕಷ್ಟಕ್ಕೀಡಾದ ರೈತರಿಗೆ ಸರ್ಕಾರ ಎಕರೆಗೆ ₹20 ಸಾವಿರದಂತೆ ಪರಿಹಾರ ಒದಗಿಸಬೇಕು. ಜತೆಗೆ ಸಾಲಮನ್ನಾ ಮಾಡುವಂತೆ ಒತ್ತಡ ಹೇರಿ ಎಂದು ಮನವಿ ಮಾಡಿದ್ದೇವೆ’ ಎಂದು ತಿಳಿಸಿದರು.

ರೈತ ಮುಖಂಡರಾದ ಮೆಹಿಬೂಬ್‌, ಅಲಿಸಾಬ್‌, ಕಮರ್‌ ಪಾಷಾ, ವಲಿಸಾಬ್, ಶಹಾಬುದ್ದೀನ್‌, ಹುಸೇನಪ್ಪ ಹಂಚಿನಾಳ್‌, ಶಿವರಾಜ್‌, ರಮೇಶ್‌ ಹಾಗೂ ಖಾಜಾಸಾಬ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.