ADVERTISEMENT

‘ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ’

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 5:21 IST
Last Updated 2 ಜನವರಿ 2022, 5:21 IST
ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು
ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು   

ಕೊಪ್ಪಳ: ‘ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಹೋಗಿ ಕೋವಿಡ್ ಲಸಿಕೆ ಹಾಕಿ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಅವರ ಸೇವೆ ಶ್ಲಾಘನೀಯ’ ಎಂದು ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ನೀತಾ ತಂಬ್ರಳ್ಳಿ ಹೇಳಿದರು.

ಹೊಸ ವರ್ಷದ ಪ್ರಯುಕ್ತ ನಗರದ ಇನ್ನರ್ ವ್ಹೀಲ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ನಡೆದ ಆಶಾ ಕಾರ್ಯಕರ್ತೆಯರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಮನೆಗೆ ಹೋಗಿ ಲಸಿಕೆ ಹಾಕಿ ಜನರ ಪ್ರಾಣ ಉಳಿಸುವ ಕಾರ್ಯ ಮಾಡಿದ್ದಾರೆ. ಹೊಸ ವರ್ಷದ ಪಯುಕ್ತ ಅವರನ್ನು ಸನ್ಮಾನಿಸಿ, ಪ್ರೋತ್ಸಾಹಿಸುವ ಕೆಲಸ ನಮ್ಮ ಕ್ಲಬ್‌ ಮಾಡುತ್ತಿದೆ ಎಂದರು.

ADVERTISEMENT

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕಳಸಾಪುರಮತ್ತು ರಾಧಾ ಕುಲಕರ್ಣಿ ಪಾಲ್ಗೊಂಡಿದ್ದರು. ವಿಜಯಲಕ್ಷ್ಮೀ ಹಂಚಾಟೆ, ಮಧು ನಿಲೋಗಲ್, ಉಮಾ ತಂಬ್ರಳ್ಳಿ ಹಾಗೂ ರೇಖಾ ಕಡ್ಲಿ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.