ADVERTISEMENT

ಕೊರೊನಾ ವಾರಿಯರ್ಸ್‌ಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:48 IST
Last Updated 14 ಜುಲೈ 2020, 17:48 IST
ಕೊಪ್ಪಳ ತಾಲ್ಲೂಕಿನ ಗಿಣಗೇರಿಯ ಶ್ರೀಗುರು ಸೃಷ್ಟಿಕರ್ತ ಪತ್ತಿನ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಗೆ ವೈದ್ಯರನ್ನು ಸನ್ಮಾನಿಸಲಾಯಿತು
ಕೊಪ್ಪಳ ತಾಲ್ಲೂಕಿನ ಗಿಣಗೇರಿಯ ಶ್ರೀಗುರು ಸೃಷ್ಟಿಕರ್ತ ಪತ್ತಿನ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಗೆ ವೈದ್ಯರನ್ನು ಸನ್ಮಾನಿಸಲಾಯಿತು   

ಕೊಪ್ಪಳ: ತಾಲ್ಲೂಕಿನ ಗಿಣಗೇರಿಯ ಶ್ರೀಗುರು ಸೃಷ್ಟಿಕರ್ತ ಪತ್ತಿನ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಈಚೆಗೆ ವೈದ್ಯರೂ ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಸ್ಥೆಯ ಅಧ್ಯಕ್ಷ ಸುರೇಶರಾವ್ ಕುಲಕರ್ಣಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ವೈದ್ಯರು ಪ್ರತಿ ಕುಟುಂಬದ ಆರೋಗ್ಯವನ್ನು ವಿಚಾರಿಸಿ, ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಎಲ್ಲರಿಗೂ ಸೂಕ್ತ ಮಾರ್ಗದರ್ಶನ ಮಾಡುವಲ್ಲಿ ಆಶಾ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡಿ, ಜನರ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸುತ್ತಿದ್ದಾರೆ. ಇಂತಹ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಗಾಳೆಪ್ಪ ಗೊರವರ ಮಾತನಾಡಿದರು.

ADVERTISEMENT

ಸನ್ಮಾನಿತ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಪತ್ರ ಮತ್ತು ಪ್ರೋತ್ಸಾಹದನ ನೀಡಲಾಯಿತು.

ಶಿವಕುಮಾರ ಕಾಕಿಸ್ವಾಗತಿಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶಿವಕುಮಾರ ಏಣಗಿ ನಿರೂಪಿಸಿದರು. ರಮೇಶ ನಾಯಕ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.