ತಾವರಗೇರಾ : ಸ್ಥಳೀಯ ಮೀನುಗಾರರ ಸಹಕಾರ ಸಂಘ ಮತ್ತು ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ , ಮೀನುಗಾರಿಕೆ ಇಲಾಖೆ ನೇತೃತ್ವದಲ್ಲಿ ಮೀನಿನ ಉತ್ತಮ ಆಹಾರ ತಯಾರಿಸಿ ಗ್ರಾಹಕರಿಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಫುಡ್ ತಯಾರಿಕೆ , ಸರಬರಾಜು ವಾಹನ ಬಾಡಿಗೆ ರೂಪದಲ್ಲಿ ಇಲಾಖೆಯು ಸಹಕಾರ ನೀಡಿದೆ.
ನಾವು ಹೋಬಳಿ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡಿ ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳಿಯ ಮೀನುರಾರರ ಸಹಕಾರ ಸಂಘದ ಅಧ್ಯಕ್ಷ ಏಕನಾಥ ಬಿ ಹೇಳಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾನುವಾರ ನಡೆದ ಮೀನು ತಯಾರಿಕೆಯ ಆಹಾರ ಮೋಬೈಲ್ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಹಕಾರ ಸಂಘದ ಉಪಾಧ್ಯಕ್ಷ ಮಹಿಬೂಬ , ಪ್ರಮುಖರಾದ ಬಸನಗೌಡ ಮಾಲಿ ಪಾಟೀಲ್, ಸಂಘದ ನಿರ್ಧೇಶಕರು ಸದಸ್ಯರು ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.