ಕನಕಗಿರಿ: ಮೇ 20ರಂದು ಹೊಸಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಫಲಾನುಭವಿಗಳ ಸುರಕ್ಷತೆ ಕಡೆಗೆ ಗಮನ ಹರಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
‘ಫಲಾನುಭವಿಗಳನ್ನು ಕರೆದುಕೊಂಡು ಹೋಗುವುದು ಹಾಗೂ ಪುನಃ ಅವರವರ ಊರಿಗೆ ಬಿಡುವ ಕಡೆಗೆ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ನಿಗಾ ವಹಿಸಬೇಕು. ಈ ಬಗ್ಗೆ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ತಿಳಿಸಿದರು.
‘ಮೇ 19ರಂದು ಎಲ್ಲಾ ನೋಡಲ್ ಅಧಿಕಾರಿಗಳು, ಮೇಲ್ವಿಚಾರಕರು ಗ್ರಾಮಗಳಿಗೆ ತೆರಳಿ ಫಲಾನುಭವಿಗಳಿಗೆ ಮಾಹಿತಿ ನೀಡಿ. ಮೇ 20ರಂದು ಬಸ್‌ನಲ್ಲಿ ಕರೆತಂದು ಅದೇ ದಿನ ಪುನಃ ಅವರ ಗ್ರಾಮಗಳಿಗೆ ಸುರಕ್ಷಿತವಾಗಿ ತಲುಪಿಸಬೇಕು’ ಎಂದರು.
ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ
ಸಹಾಯಕ ನಿರ್ದೇಶಕಿ ಶೃತಿ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಅರುಣಗುರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.