ADVERTISEMENT

ಕುಷ್ಟಗಿ: ತೆರವಾಗದ ಡಬ್ಬಾ ಅಂಗಡಿಗಳು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:00 IST
Last Updated 20 ಏಪ್ರಿಲ್ 2021, 3:00 IST
ಕುಷ್ಟಗಿ ಸರ್ಕಾರಿ ಆಸ್ಪತ್ರೆ ಮುಂದಿನ ಪಾದಚಾರಿ ರಸ್ತೆಯಲ್ಲಿ ಅಂಗಡಿಗಳನ್ನು ತೆರವುಗೊಳಿಸದೆ ಗ್ರಿಲ್‌ ಅಳವಡಿಸುತ್ತಿರುವುದು ಕಂಡುಬಂದಿತು
ಕುಷ್ಟಗಿ ಸರ್ಕಾರಿ ಆಸ್ಪತ್ರೆ ಮುಂದಿನ ಪಾದಚಾರಿ ರಸ್ತೆಯಲ್ಲಿ ಅಂಗಡಿಗಳನ್ನು ತೆರವುಗೊಳಿಸದೆ ಗ್ರಿಲ್‌ ಅಳವಡಿಸುತ್ತಿರುವುದು ಕಂಡುಬಂದಿತು   

ಕುಷ್ಟಗಿ: ಇಲ್ಲಿಯ ಸರ್ಕಾರಿ ಆಸ್ಪತ್ರೆಯ ಬಳಿ ಪುರಸಭೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಪಾದಚಾರಿ ಮಾರ್ಗ ನಿರ್ಮಿಸಿದೆ. ಅದರ ಮೇಲೆ ಡಬ್ಬಾ ಅಂಡಿಗಳಲ್ಲಿ ಕೆಲವರು ವ್ಯಾಪಾರ ನಡೆಸಿದ್ದು, ಅವುಗಳ ತೆರವಿಗೆ ಪುರಸಭೆ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

14ನೇ ಹಣಕಾಸು ಯೋಜನೆಯಡಿ ಅಂದಾಜು ₹ 8.50 ಲಕ್ಷ ಅನುದಾನದಲ್ಲಿ ಪಾದಚಾರಿ ಮಾರ್ಗ ನಿರ್ಮಿಸಿದಾಗ, ಆಸ್ಪತ್ರೆಗೆ ಹೋಗಿ ಬರಲು ಜನರಿಗೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ, ಪಾದಚಾರಿ ಮಾರ್ಗ ನಿರ್ಮಾಣಗೊಂಡ ಕೂಡಲೇ ಅದರ ಮೇಲೆ ಕೆಲ ವ್ಯಾಪಾರಸ್ಥರು ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಆರಂಭಿಸಿದರು‌’ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

ಡಬ್ಬಾ ಅಂಗಡಿಗಳನ್ನು ತೆರವುಗೊಳಿಸುವ ಬದಲು ಪಾದಚಾರಿ ಮಾರ್ಗದ ಬದಿಯಲ್ಲೇ ಗ್ರಿಲ್‌ಗಳನ್ನು ಹಾಕಲಾಗುತ್ತಿದೆ. ಹೀಗೆ ಮಾಡುವುದರಿಂದ ತೆರವು ಕಾರ್ಯಾಚರಣೆಗೆ ಅವಕಾಶವೇ ಇರುವುದಿಲ್ಲ. ಆಸ್ಪತ್ರೆ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಕ್ರಮ ಅಂಗಡಿಗಳಿದ್ದು, ಅವುಗಳನ್ನು ತೆರವುಗೊಳಿಸುವಂತೆ ಪುರಸಭೆಗೆ ಹಲವು ಬಾರಿ ಕೋರಿದರೂ ಪ್ರಯೋಜನವಾಗಿಲ್ಲ’ ಎಂದು ಅವರು ಹೇಳುತ್ತಾರೆ.

ADVERTISEMENT

‘ಸಂತೆ ಮೈದಾನದ ರಸ್ತೆಯಲ್ಲೂ ಇದೇ ಪರಿಸ್ಥಿತಿಯಿದೆ. ಕೆಲವರು ಕಾಂಕ್ರೀಟ್‌ನಿಂದ ಮಳಿಗೆಗಳನ್ನು ನಿರ್ಮಿಸಿ
ಕೊಂಡಿದ್ದಾರೆ. ಕೆಲವರು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ.ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸುತ್ತಾರೆ.

ಈ ಸಂಬಂಧ ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರಿಂದ ಪ್ರತಿಕ್ರಿಯೆ ದೊರೆಯಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.