ADVERTISEMENT

ಯಲಬುರ್ಗಾ: ಮಾಜಿ ಶಾಸಕ ಶಿವಶರಣಗೌಡ ಪಾಟೀಲ ನಿಧನ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 8:21 IST
Last Updated 26 ನವೆಂಬರ್ 2025, 8:21 IST
   

ಯಲಬುರ್ಗಾ (ಕೊಪ್ಪಳ ಜಿಲ್ಲೆ): ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ (82) ಬುಧವಾರ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್ ಸೇರಿದಂತೆ ಒಟ್ಟು ನಾಲ್ಕು ಜನ ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.

ಯಲಬುರ್ಗಾ ಪಟ್ಟಣದ ಅವರ ನಿವಾಸದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಬೆಳಿಗ್ಗೆ 9ರ ತನಕ ಪಾರ್ಥಿವ ಶರೀರದ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಸ್ವಗ್ರಾಮ ಹುಣಸಿಹಾಳ ಗ್ರಾಮದಲ್ಲಿ ಗುರುವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಶಿವಶರಣಗೌಡ ಪಾಟೀಲ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು.

ಇದಕ್ಕೂ ಮೊದಲು ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.