ADVERTISEMENT

‘ಶ್ರೀರಾಮನ ಆದರ್ಶ ಅಳವಡಿಸಿಕೊಳ್ಳಿ’

ಆಯೋಧ್ಯೆಯ ಶ್ರೀರಾಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಕರಿಬಸವ ಸ್ವಾಮೀಜಿ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 11:21 IST
Last Updated 15 ಜನವರಿ 2021, 11:21 IST
ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನಕ್ಕೆ ಕರಿಬಸವ ಸ್ವಾಮೀಜಿ ಚಾಲನೆ ನೀಡಿದರು
ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನಕ್ಕೆ ಕರಿಬಸವ ಸ್ವಾಮೀಜಿ ಚಾಲನೆ ನೀಡಿದರು   

ಕುಷ್ಟಗಿ: ‘ಶ್ರೀರಾಮ, ಮಂದಿರಕ್ಕಿಂತ ಹೃದಯದಲ್ಲಿ ನೆಲೆಸುವಂತಾಗಬೇಕು. ಅವರ ಆದರ್ಶ ಗುಣಗಳನ್ನು ಬದುಕಿನ ಭಾಗವಾಗಿಸಿಕೊಳ್ಳುವ ಮೂಲಕ ಸಮಷ್ಟಿ ಪ್ರಜ್ಞೆ ಮೆರೆಯಬೇಕು’ ಎಂದು ಮದ್ದಾನೇಶ್ವರ ಮಠದ ಕರಿಬಸವ ಸ್ವಾಮೀಜಿ ಸಲಹೆ ನೀಡಿದರು.

ಪಟ್ಟಣದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

‘ಜನರಲ್ಲಿ ಧಾರ್ಮಿಕ, ಸಾಮಾಜಿಕ ಪ್ರಜ್ಞೆ ಹೆಚ್ಚಬೇಕು. ದೇಣಿಗೆ ನೀಡುವ ಮೂಲಕ ಎಲ್ಲ ಬೇಧಗಳನ್ನು ಮರೆತು ರಾಮಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಕೆ.ಶರಣಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಹಳ್ಳೂರು, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ, ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಸದಸ್ಯರಾದ ಕಲ್ಲೇಶ ತಾಳದ, ಮಹಾಂತೇಶ ಕಲಭಾವಿ, ರಾಜೇಶ ಪತ್ತಾರ, ಪ್ರಮುಖರಾದ ವಿಜಯಕುಮಾರ ಹಿರೇಮಠ, ಮಹೇಶ ಕೊನಸಾಗರ, ವೀರೇಶ ನಾಯಕ, ಮಲ್ಲಿಕಾರ್ಜುನ ಮಸೂತಿ, ನಾಗರಾಜ ಕೋರಿ ಹಾಗೂ ಮಲ್ಲಿಕಾರ್ಜುನ ಗುಗ್ಗರಿ ಇದ್ದರು.

ಕಾರ್ಗಿಲ್ ಯೋಧ ಮಲ್ಲಯ್ಯ ವೃತ್ತದಿಂದ ಆರಂಭಗೊಂಡ ಅಭಿಯಾನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಸಾರ್ವಜನಿಕರು, ವರ್ತಕರಿಂದ ನಿಧಿ ಸಂಗ್ರಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.