ಯಲಬುರ್ಗಾ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಯುಕ್ತ ಭಾವಚಿತ್ರಕ್ಕೆ ವಿಶೇಷ ಗೌರವ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿ, ‘ಗಾಂಧಿ ಜಯಂತಿಯನ್ನು ಅಹಿಂಸಾ ದಿನವನ್ನಾಗಿ ಆಚರಿಸುವ ಮೂಲಕ ಗಾಂಧಿಯವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುತ್ತದೆ. ಗಾಂಧೀಜಿಯವರು ಅಂಹಿಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಶ್ರಮಿಸಿದ್ದನ್ನು ಸ್ಮರಿಸಬಹುದು. ಅನೇಕ ಮಾರ್ಗಗಳಲ್ಲಿ ಗಾಂಧೀಜಿಯವರು ಈ ಮಾರ್ಗವನ್ನು ಬಲವಾಗಿ ನಂಬಿ ಅದರಂತೆ ನಡೆದುಕೊಂಡಿದ್ದರು’ ಎಂದರು.
‘ದೇಶಕಂಡ ಅತ್ಯಂತ ಶ್ರೇಷ್ಠ ರಾಜಕಾರಣಿಯಾಗಿದ್ದ ಶಾಸ್ತ್ರಿಯವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದ ಶಾಸ್ತ್ರಿಯವರಂತರು ಸಿಗುವುದು ತೀರಾ ಅಪರೂಪ. ಅಂತಹ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆಯೇ ಒಂದು ಸೌಭಾಗ್ಯ’ ಎಂದು ನುಡಿದರು.
ಕುಕನೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಪಾಟೀಲ, ಶಿರಸ್ತೇದಾರ ಎಂ.ದೇವರಡ್ಡಿ, ಭೂ ಮಾಪನ ಸಹಾಯಕ ಅಧಿಕಾರಿ ಪುಂಡಲೀಕಪ್ಪ ಕುಂಬಾರ, ಶ್ರುತಿ ಮಾಕಾಪುರ, ಶ್ರುತಿ ಕಲ್ಮಠ, ಆಹಾರ ನಿರೀಕ್ಷಕ ಹನುಮಗೌಡ ಪಾಟೀಲ್, ರೇಹಮಾನ್ ರೇವಡಿ, ಶ್ರೀಕಾಂತಗೌಡ ಮಾಲಿಪಾಟೀಲ್ ಸೇರಿ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.