ADVERTISEMENT

ಕುಕನೂರು | ಗಣೇಶ ಹಬ್ಬ: ಶಾಂತಿ ಸಭೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 14:44 IST
Last Updated 27 ಆಗಸ್ಟ್ 2024, 14:44 IST
ಕುಕನೂರಿನ ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ ಶಾಂತಿ ಸಭೆ ನಡೆಯಿತು
ಕುಕನೂರಿನ ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ ಶಾಂತಿ ಸಭೆ ನಡೆಯಿತು   

ಕುಕನೂರು: ‘ಗಣೇಶ ಹಬ್ಬದಲ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡಿಜೆ ಸೌಂಡ್ ಸಿಸ್ಟಮ್‌ಗೆ ಅನುಮತಿ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು’ ಎಂದು ಪಿಎಸ್ಐ ಗುರುರಾಜ್ ಟಿ. ಹೇಳಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸುತ್ತಮುತ್ತಲಿನಲ್ಲಿ ಸರಿಸುಮಾರು ನೂರಕ್ಕೂ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಅದೇ ರೀತಿ ಸೆ. 15-16 ರಂದು ಮುಸ್ಲಿಮರ ಈದ್ ಮಿಲಾದ್ ಹಬ್ಬವು ಇರುವುದರಿಂದ, ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ ಈ ಎರಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಹೇಳಿದರು.

ADVERTISEMENT

ಈದ್ ಮಿಲಾದ್ ಇರುವ ಕಾರಣ 11ನೇ ದಿನ ಗಣೇಶನ ಮೂರ್ತಿ ವಿಸರ್ಜನೆಯನ್ನು 7ನೇ ದಿನ ಹಾಗೂ 9ನೇ ದಿನದಂದು ನೆರವೇರಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.