ಗಂಗಾವತಿ: ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗಂಗಾಮತ ಸಮಾಜದಿಂದ ಗಂಗಾದೇವಿ ಜಾತ್ರಾ ಮಹೋತ್ಸವವನ್ನ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ಗಂಗಾದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗಂಗಾದೇವಿ ದೇವಸ್ಥಾನದಲ್ಲಿ ಬೆಳಿಗ್ಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಸಲಾಯಿತು.
ನಂತರ ಗಂಗಾದೇವಿ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಕುಂಭ, ಕಳಸಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.
ಹೆಬ್ಬಾಳ ಬೃಹನ್ಮಠದ ನಾಗಭೂಷಣ ಸ್ವಾಮೀಜಿ ಮಾತನಾಡಿ, ‘ಪ್ರತಿಯೊಬ್ಬರು ಸಮಾಜದ ಏಳಿಗೆ ದುಡಿಯಬೇಕು.ಅಂದಾಗ ಮಾತ್ರ ಸಮಾಜದ ಬದಲಾವಣೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.
ನಂತರ ಸಂಜೆ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಭಕ್ತರ ಸಮ್ಮುಖದಲ್ಲಿ ಗಂಗಾದೇವಿ ರಥೋತ್ಸವವನ್ನು ಮಹಿಳೆಯರು ಎಳೆದರು. ಗಂಗಾಮತ ಸಮಾಜದ ಮುಖಂಡರು, ಭಕ್ತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.