ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಟ್ರಾವೆಲ್ಸ್ ಮತ್ತು ಸ್ಟೇಶನರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಕುಟುಂಬಕ್ಕೆ ಸೋಂಕು ತಗುಲಿದ್ದು, ಸೋಂಕಿತರು ಶ್ರೀರಾಮನಗರದ 1ನೇ ವಾರ್ಡ್ ನಿವಾಸಿಗಳು.
ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಏರಿಯಾ ಸೀಲ್‌ಡೌನ್‌ಗೆ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.
ಸೋಂಕಿತರನ್ನು ಕೊಪ್ಪಳದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.