ADVERTISEMENT

ಶಾಸಕ ಜನಾರ್ದನ ರೆಡ್ಡಿಗೆ ಜಾಮೀನು: ಕಾರ್ಯಕರ್ತರಿಂದ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:16 IST
Last Updated 11 ಜೂನ್ 2025, 13:16 IST
ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿರುವುದಕ್ಕೆ ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಸಂಭ್ರಮಾಚರಣೆ ನಡೆಸಿದರು
ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿರುವುದಕ್ಕೆ ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಸಂಭ್ರಮಾಚರಣೆ ನಡೆಸಿದರು   

ಗಂಗಾವತಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಜನಾರ್ದನರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ಬೆನ್ನಲ್ಲೆ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು, ರೆಡ್ಡಿ ಬೆಂಬಲಿಗರು ಬುಧವಾರ ಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು.

ಇದಕ್ಕೂ ಮುನ್ನ ಪಕ್ಷದ ಎಲ್ಲ ಕಾರ್ಯಕರ್ತರು ಗಾಂಧಿ ವೃತ್ತದ ಬಳಿ ಪಟಾಕಿ ಸಿಡಿಸಿ, ಬಣ್ಣದ ಓಕುಳಿ ಆಡಿ ಸಂಭ್ರಮಿಸಿದರು.

ಸಿಂಗನಾಳ ವಿರೂಪಾಕ್ಷಪ್ಪ, ತಿಪ್ಪೇರುದ್ರಸ್ವಾಮಿ, ಈ. ರಾಮಕೃಷ್ಣ, ಪಂಪಣ್ಣ ನಾಯಕ, ರಮೇಶ ಚೌಡ್ಕಿ, ಯಮನೂರ ಚೌಡ್ಕಿ, ವೀರೇಶ ಬಲಕುಂದಿ, ಕಾಶಿನಾಥ ಚಿತ್ರಗಾರ, ರಾಚಪ್ಪ ಸಿದ್ದಪೂರ, ಉಮೇಶ ಸಿಂಗನಾಳ ಸೇರಿ ಮಹಿಳೆಯರು ಉಪಸ್ಥಿತರಿದ್ದರು.

ADVERTISEMENT

ಈ ವೇಳೆ ಮಾತನಾಡಿದ ಪಕ್ಷದ ಕಾರ್ಯಕರ್ತ ನಾಗರಾಜ ಚಳಗೇರಿ ಮಾತನಾಡಿ, ‘ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ. ಜನಾರ್ದನ ರೆಡ್ಡಿ ಅವರನ್ನು ಹೈದರಾಬಾದ್ ಸಿಬಿಐ ಕೋರ್ಟ್ ತಪ್ಪಿತಸ್ಥ ಎಂದು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಬಳಿಕ ಕೋರ್ಟ್ ಕೆಲ ಷರತ್ತುಗಳನ್ವಯ ರೆಡ್ಡಿ ಅವರಿಗೆ ಜಾಮೀನು ನೀಡಿದೆ. ಈ ಬೆಳವಣಿಗೆ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ಖುಷಿ ತಂದಿದೆ. ಕೆಲವೇ ದಿನಗಳಲ್ಲಿ ಶಾಸಕರು ಕ್ಷೇತ್ರಕ್ಕೆ ಬರಲಿದ್ದು, ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.