ADVERTISEMENT

ಗಂಗಾವತಿ: ಗುಪ್ತಚರ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 5:00 IST
Last Updated 17 ಜೂನ್ 2022, 5:00 IST
ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಮನೆ
ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಮನೆ   

ಗಂಗಾವತಿ (ಕೊಪ್ಪಳ): ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನೆಲೆಸಿರುವ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಚೆಗೆ ಉದಯರವಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಬೆಂಗಳೂರಿಗೆ ಗುಪ್ತಚರ ಇಲಾಖೆಗೆ ವರ್ಗಾವಣೆ ಆಗಿದ್ದರು.

ವರ್ಗಾವಣೆಗೂ ಮುನ್ನ ಉದಯ ರವಿ ಮೇಲೆ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಮಟ್ಕಾ, ಇಸ್ಪೀಟ್ ದಂಧೆ ಹಾಗೂ ಮರಳು ಮಾಫಿಯಾದಲ್ಲಿ ಅಧಿಕಾರಿ ಭಾಗಿಯಾಗಿದ್ದಾರೆ ಎಂದು
ಆರೋಪಿಸಿದ್ದರು. ಈಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ ಪೊಲೀಸ್ ಮಹಾನಿರ್ದೇಶಕರಿಗೆ ಈ ಕುರಿತು ದೂರು ಸಲ್ಲಿಸಿ, ತನಿಖೆ ನಡೆಸಲು ಮನವಿ ಮಾಡಿದ್ದರು.

ADVERTISEMENT
ಮುದ್ಗಲ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಉದಯರವಿ ನಿವಾಸದಲ್ಲಿ ಪತ್ತೆಯಾಗಿರುವ ನಗದು ಮತ್ತು ಚಿನ್ನಾಭರಣ

ಎಸಿಬಿ ಡಿವೈಎಸ್ಪಿ ಶಿವ ಕುಮಾರ್ ನೇತೃತ್ವದ ತಂಡ ದಾಳಿ ಮಾಡಿದೆ. ರವಿ ಅವರ ನಾಲ್ಕು ಮನೆಗಳ‌ಲ್ಲಿ ಎಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.