ADVERTISEMENT

ಗಂಗಾವತಿ| ಅಳತೆ ಪ್ರಕಾರ ಕೆಲಸ ನಿರ್ವಹಿಸಿ: ಮಹಾಂತಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 6:48 IST
Last Updated 11 ಫೆಬ್ರುವರಿ 2026, 6:48 IST
ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾ.ಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾ.ಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಗಂಗಾವತಿ: ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾ.ಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ‘ಕೂಲಿಕಾರರು ತಮಗೆ ವಹಿಸಿದ ಅಳತೆ ಪ್ರಕಾರ ಕೆಲಸ ನಿರ್ವಹಿಸಬೇಕು. ನಾಲಾ ಹೂಳೆತ್ತುವುದರಿಂದ ರೈತರಿಗೆ ಅನುಕೂಲ ಆಗಲಿದೆ. ಪ್ರತಿ ದಿನ ಎರಡು ಸಾರಿ ಕಡ್ಡಾಯವಾಗಿ ಎನ್ಎಂಎಂಎಸ್ ಹಾಜರಾತಿ ಹಾಕಿಸಿಕೊಳ್ಳಬೇಕು. ಗ್ರಾ.ಪಂ ಸಿಬ್ಬಂದಿ ಪಾರದರ್ಶಕವಾಗಿ ಹಾಜರಾತಿ ಹಾಕಬೇಕು’ ಎಂದು ಸೂಚನೆ ನೀಡಿದರು.

ಪಿಡಿಒ ರವೀಂದ್ರ ಕುಲಕರ್ಣಿ, ತಾಂತ್ರಿಕ ಸಂಯೋಜಕ ಬಸವರಾಜ ಜಟಗಿ, ತಾಲ್ಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಾಂತ್ರಿಕ ಸಹಾಯಕ ಶರಣಯ್ಯ, ಗ್ರಾ.ಪಂ ಡಿಇಒ ಆನಂದ, ಬಿಎಫ್‌ಟಿ ಮಾರುತಿ, ಜಿಕೆಎಂ ಶ್ರೀದೇವಿ ಸೇರಿ ಕಾಯಕ ಬಂಧುಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.