ADVERTISEMENT

ಗಂಗಾವತಿ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 6:33 IST
Last Updated 6 ಜುಲೈ 2025, 6:33 IST
ಗಂಗಾವತಿ ಮಂಥನ ಸಭಾಂಗಣದಲ್ಲಿ ತಾಲ್ಲೂಕು ಆಡ ಳಿತದಿಂದ ಬೂತ್‌ಮಟ್ಟದ ಅಧಿಕಾರಿಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಶನಿವಾರ ತರಬೇತಿ ಕಾರ್ಯ ಗಾರ ನಡೆಸಲಾಯಿತು.
ಗಂಗಾವತಿ ಮಂಥನ ಸಭಾಂಗಣದಲ್ಲಿ ತಾಲ್ಲೂಕು ಆಡ ಳಿತದಿಂದ ಬೂತ್‌ಮಟ್ಟದ ಅಧಿಕಾರಿಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಶನಿವಾರ ತರಬೇತಿ ಕಾರ್ಯ ಗಾರ ನಡೆಸಲಾಯಿತು.   

ಗಂಗಾವತಿ: ನಗರದ ತಾ.ಪಂ ಮಂಥನ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪೂರ್ವ ತಯಾರಿ ಕುರಿತು ಶನಿವಾರ ಬೂತ್‌ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು.

ತಹಶೀಲ್ದಾರ್‌ ಯು.ನಾಗರಾಜ ಮಾತನಾಡಿ, ‘ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಂಗಾವತಿ ಗ್ರಾಮೀಣ ಹಾಗೂ ವೆಂಕಟಗಿರಿ ಹೋಬಳಿ ವ್ಯಾಪ್ತಿಗೆ ಒಳಪಡುವ ಬೂತ್‌ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಸದ್ಯ ಮೊಬೈಲ್ ಮೂಲಕ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರಿಗಳು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಯುವ ಮತದಾರರಿಗೆ ನಮೂನೆ 6 ಭರ್ತಿ ಮಾಡಿಕೊಳ್ಳಬೇಕು. ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು ಇದ್ದರೆ, ನಮೂನೆ-7 ಭರ್ತಿ ಮಾಡಬೇಕಾಗಿದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಜತೆಗೆ ಸ್ಥಳಾಂತರ ಮಾಡುವುದಿದ್ದರೆ ನಮೂನೆ- 8 ಭರ್ತಿ ಮಾಡಬೇಕು’ ಎಂದು ಹೇಳಿದರು.

ನಂತರ ಬೂತ್‌ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು. ಚುನಾವಣೆ ಶಿರಸ್ತೇದಾರ ರವಿಕುಮಾರ ನಾಯಕವಾಡಿ, ಸೋಮಶೇಖರ, ಕುಮಾರಸ್ವಾಮಿ, ಲಕ್ಷೀದೇವಿ ಗೊಟೂರು, ಮೊಮ್ಮದ್ ರಫೀಕ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.