ಗಂಗಾವತಿ (ಕೊಪ್ಪಳ): ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ನೀರಿಗಾಹುತಿಯಾಗಿದೆ.
ಗಂಗಾವತಿ ತಾಲ್ಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ.
ಮಳೆಯಿಂದ ಹೆಚ್ಚಿನ ನೀರು ಕಾಲುವೆಗೆ ಹರಿದು ಬಂದ ಪರಿಣಾಮ ನೀರಿನ ರಬಸಕ್ಕೆ ಕಾಲುವೆ ಒಡೆದು ಅಕ್ಕ ಪಕ್ಕದ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಕೊಚ್ಚಿಹೋಗಿದೆ.
ಇತ್ತೀಚೆಗಷ್ಟೆ ಕಾಲುವೆ ದುರಸ್ತಿ ಮಾಡಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಮಾಡುತ್ತಿದ್ದು ಮತ್ತು ಕಳಪೆ ಕಾಮಗಾರಿ ಮಾಡಿದ್ದರ ಪರಿಣಾಮ ಕಾಲುವೆ ಒಡೆದು ಹೋಗಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.