
ಪ್ರಜಾವಾಣಿ ವಾರ್ತೆ
ಗಂಗಾವತಿ: ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಂಗಳವಾರ ಸಂಜೆ ಮಳೆ ಸುರಿದಿದ್ದು, ನಗರದಲ್ಲಿ ಸಾರ್ವಜನಿಕರು ಸಂಚಾರಕ್ಕಾಗಿ ಕೆಲ ಗಂಟೆ ಪರದಾಡಿದರು.
ದೀಪಾವಳಿ ಹಬ್ಬದ ನಿಮಿತ್ತ ಸಾರ್ವಜನಿಕರು ಅಂಜನಾದ್ರಿ, ಹುಲಿಗಿಯ ಹುಲಿಗೆಮ್ಮ ದೇವಸ್ಥಾನ, ಪಂಪಾಸರೋವರ, ದುರ್ಗಾದೇವಿ ದೇವಸ್ಥಾನಕ್ಕೆ ನೂರಾರು ಸಂಖ್ಯೆಯಲ್ಲಿ ಬಂದು, ದರ್ಶನ ಪಡೆದರು. ಮಳೆಯಲ್ಲಿ ಸಿಲುಕಿ ಊರು ಸೇರಲು ಪರದಾಡಿದರು.
ಈ ಮಳೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬೆಳೆದು ನಿಂತು ಕಟಾವಿಗೆ ಬಂದ ಭತ್ತದ ಬೆಳೆಗಳು ನೆಲಕ್ಕೆ ಉರುಳಿದ ದೃಶ್ಯಗಳು ಕಂಡುಬಂದವು. ನಗರದ ವಿವಿಧ ವಾರ್ಡ್‌ಗಳಲ್ಲಿನ ಖಾಲಿ ನಿವೇಶನಗಳಲ್ಲಿ ಮಳೆ ನೀರು ನಿಂತಿತು. ಕೆಲವೆಡೆ ರಸ್ತೆಯಲ್ಲಿ ನೀರು ಹರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.