ಪೊಲೀಸ್ (ಪ್ರಾತಿನಿಧಿಕ ಚಿತ್ರ)
ಕೊಪ್ಪಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಇಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ.
ಇಲ್ಲಿನ ಸಜ್ಜೆಹೊಲ ಪ್ರದೇಶದ ಡಬ್ಬಿ ಅಂಗಡಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಫಾತಿಮಾ ಚವ್ಹಾಣ ಹಾಗೂ ಡಿ.ಜೆ. ಆಪರೇಟರ್ ಸುಭಾಷ್ ವಿರೂಪಣ್ಣ ಕರಡಿ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಇವರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಮಾರೆಪ್ಪ ಚವ್ಹಾಣ ಪರಾರಿಯಾದವ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.