ADVERTISEMENT

ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2025, 16:22 IST
Last Updated 18 ಏಪ್ರಿಲ್ 2025, 16:22 IST
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಗ್ರಾ.ಪಂ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಿಂದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆ ಗುರುವಾರ ಜರುಗಿತು
ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಗ್ರಾ.ಪಂ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಿಂದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆ ಗುರುವಾರ ಜರುಗಿತು    

ಗಂಗಾವತಿ: ‘ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು’ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ವೆಂಕಟೇಶಬಾಬು ಹೇಳಿದರು.

ತಾಲ್ಲೂಕಿನ ಆನೆಗೊಂದಿ ಗ್ರಾಮದ ಗ್ರಾ.ಪಂ.ಸಭಾಂಗಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಕುರಿತ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳನ್ನು ನೀಡಿದ ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಗ್ರಾ.ಪಂ ಮಟ್ಟದಲ್ಲಿ ‘ಗ್ಯಾರಂಟಿ ಸಮಿತಿ ಸದಸ್ಯರ ನಡೆ, ಗ್ರಾ.ಪಂ.ಗಳ ಕಡೆ’ ಎಂಬ ವಿನೂತನ ಪ್ರಯತ್ನಕ್ಕೆ ಕೈ ಹಾಕಲಾಗಿದೆ’ ಎಂದರು.

ADVERTISEMENT

‘ಗ್ರಾ.ಪಂ ಪಿಡಿಒಗಳು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು’ ಎಂದು ಮಾಹಿತಿ ನೀಡಿದರು.

ಗಂಗಾವತಿ ತಾಲ್ಲೂಕಿನಲ್ಲಿ 56,045 ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆದರೆ, 2ಲಕ್ಷ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಫಲ ಪಡೆ‌ಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಮಾರ್ಚ್ ತಿಂಗಳಲ್ಲಿ ₹2.89 ಕೋಟಿ ಆದಾಯ ಬಂದಿದೆ. ಗೃಹಜ್ಯೋತಿ ಯೋಜನೆಯಡಿ 60,256 ಫಲಾನುಭವಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.

ತಾ.ಪಂ. ಇಒ ರಾಮರೆಡ್ಡಿ ಪಾಟೀಲ, ಸಿಡಿಪಿಒ ಜಯಶ್ರೀ, ಗ್ರಾ.ಪಂ. ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಮುಸ್ತಾಕ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.

ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಗ್ರಾ.ಪಂ ಸ ಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಿಂದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆ ಗುರುವಾರ ಜರುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.