ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಕೆ ಕಾರ್ಯಾಚರಣೆಯಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ ಕಾರ್ಮಿಕರಿಗೆ ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ₹2 ಲಕ್ಷ ಬಹುಮಾನ ನೀಡಿದರು.
ಆಣೆಕಟ್ಟೆಯ ಸೇತುವೆ ಮೇಲೆ ತೆರಳಿ ಎಲ್ಲ ಸಿಬ್ಬಂದಿಯನ್ನು ಅಭಿನಂದಿಸಿದ ಅವರು ಬಹುಮಾನದ ಮೊತ್ತ ನೀಡಿದರು.
‘ಎಲ್ಲ ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯಾಚರಣೆ ಯಶಸ್ವಿಯಾಗಲು ಕಾರಣರಾಗಿದ್ದಾರೆ. ಸಂಘಟಿತವಾಗಿ ಕೆಲಸ ಮಾಡಿದ್ದಕ್ಕೆ ಯಶಸ್ಸು ಸಾಧ್ಯವಾಗಿದೆ’ ಎಂದು ರಾಜಶೇಖರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.