ADVERTISEMENT

ಗಂಗಾವತಿ | ಬಾಲಕಿ ಅತ್ಯಾಚಾರ, ಕೊಲೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 2:46 IST
Last Updated 26 ಡಿಸೆಂಬರ್ 2021, 2:46 IST
ಗಂಗಾವತಿ ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಜಿಲ್ಲಾ‌ ಗೋರಸೇನಾ ಘಟಕದ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಲಾಯಿತು
ಗಂಗಾವತಿ ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಜಿಲ್ಲಾ‌ ಗೋರಸೇನಾ ಘಟಕದ ವತಿಯಿಂದ ವಿಜಯಪುರ ಜಿಲ್ಲೆಯಲ್ಲಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಲಾಯಿತು   

ಗಂಗಾವತಿ: ವಿಜಯಪುರ ಜಿಲ್ಲೆಯ ಗ್ರಾಮವೊಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರ ಎಸಗಿ, ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ, ಜಿಲ್ಲಾ ಗೋರಸೇನಾ ಜಿಲ್ಲಾ ಘಟಕದ ಕಾರ್ಯಕರ್ತರು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಜಾದವ್ ಮಾತನಾಡಿ, ‘ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಆಕೆಯನ್ನು ಕೊಲೆ ಮಾಡಿದ್ದು ತೀವ್ರ ಖಂಡನೀಯ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಇದುವರೆಗೂ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ’ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಂಜಾರ ಸಮುದಾಯದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅತ್ಯಾಚಾರಗಳು ನಡೆಯುತ್ತಿವೆ. ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಬಾಲಕಿ ಮತ್ತು ಮಹಿಳೆಯರ ರಕ್ಷಣೆಗೆ ವಿಶೇಷ ಕಾನೂನು ಜಾರಿಗೆ ತರಬೇಕು.
ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಬಾಲಕಿ ಮೇಲೆ ಅತ್ಯಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಲು ವಿಳಂಬ ಮಾಡಿದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವು ಎಂದರು.

ಗಂಗಾವತಿಯ ವಿರೂಪಾಪುರ ತಾಂಡದ ಸೇವಾಲಾಲ್ ವೃತ್ತದಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಶ್ರೀಕೃಷ್ಣ ದೇವರಾಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಂಜಾರ ಸಮಾಜದ ಲಕ್ಷ್ಮಣ್ ನಾಯ್ಕ್, ರವಿ ನಾಯ್ಕ್ , ಶಿವಪ್ಪ , ಶಂಕರ್ ನಾಯ್ಕ್, ಪಾಂಡುರಂಗ ಮೇಸ್ತ್ರಿ, ಸೋಮು ರಾಹುಲ್, ಚೇತನ, ಪರಶುರಾಮ, ರವಿಚಂದ್ರ ಮೇಸ್ತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.