ADVERTISEMENT

ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ: ರಾಮತ್ನಾಳ್

​ಪ್ರಜಾವಾಣಿ ವಾರ್ತೆ
Published 14 ಮೇ 2025, 16:04 IST
Last Updated 14 ಮೇ 2025, 16:04 IST
ಕೊಪ್ಪಳದಲ್ಲಿ ಇತ್ತೀಚೆಗೆ ನಡೆದ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟೆಪ್ಪನವರ ಮಾತನಾಡಿದರು
ಕೊಪ್ಪಳದಲ್ಲಿ ಇತ್ತೀಚೆಗೆ ನಡೆದ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟೆಪ್ಪನವರ ಮಾತನಾಡಿದರು   

ಕೊಪ್ಪಳ: ‘ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ, ಸಮೂಹ ನೃತ್ಯ, ಸಮೂಹ ಸಂಗೀತ, ಚಿತ್ರಕಲೆ, ಜೇಡಿ ಮಣ್ಣಿನ ಕಲೆಯನ್ನು ಬೇಸಿಗೆ ಶಿಬಿರದಲ್ಲಿ ಕಲಿತುಕೊಳ್ಳಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ ರಾಮತ್ನಾಳ್ ಹೇಳಿದರು.

ಇತ್ತೀಚೆಗೆ ಇಲ್ಲಿನ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಬಾಲ ಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಕೊಪ್ಪಳ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪ್ರಕಾಶ್ ಕಡಗದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ‘ಮಕ್ಕಳು ಶಿಬಿರದಲ್ಲಿ ಭಾಗವಹಿಸಿ ಬೇಸಿಗೆ ಶಿಬಿರದಲ್ಲಿ ಚಟುವಟಿಕೆಗಳನ್ನು ಆಸಕ್ತಿಯಿಂದ ಕಲಿತು ಪ್ರದರ್ಶನ ಮಾಡಬೇಕು’ ಎಂದು ಹೇಳಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟೆಪ್ಪನವರ, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಸಿಡಿಪಿಒಗಳಾದ ರೋಹಿಣಿ ಕೊಟಗಾರ, ಬೆಟ್ಟದೇಶ ಮಾಳೆಕೊಪ್ಪ, ಜಯಶ್ರೀ ಆರ್, ಯಲ್ಲಮ್ಮ ಹಂಡಿ, ವಿರೂಪಾಕ್ಷಿ, ಉತ್ಕರ್ಷ ಸಂಯೋಜಕ ಪುನೀತ್ ರಾಜ ಹಾಗೂ ಜಿಲ್ಲಾ ಬಾಲಭವನ ಸಂಯೋಜಕ ಮೆಹಬೂಬಸಾಬ ಇಲಾಹಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.