ADVERTISEMENT

ನರೇಗಾ ಕೂಲಿಕಾರರಿದ್ದ ಗೂಡ್ಸ್ ವಾಹನ ಪಲ್ಟಿ: ಗಾಯ

​ಪ್ರಜಾವಾಣಿ ವಾರ್ತೆ
Published 14 ಮೇ 2025, 15:03 IST
Last Updated 14 ಮೇ 2025, 15:03 IST
ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ತೆರಳಿರುವ ಕೂಲಿಕಾರರ ಮಹೇಂದ್ರ ಗೂಡ್ಸ್ ವಾಹನವೊಂದು ಬರಗೂರು ಕ್ರಾಸ್ ಬಳಿ ರಸ್ತೆಗೆ ಪಲ್ಟಿಯಾಗಿ, ಗಾಯಗೊಂಡು ಉಪವಿಭಾಗ ಆ ಸ್ಪತ್ರೆಗೆ ದಾಖಲಾದ ಕೂಲಿಕಾರರ ಆರೋಗ್ಯವನ್ನ ಜಿಲ್ಲಾ ಉ ಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ವಿಚಾರಿಸಿದ ರು.
ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ತೆರಳಿರುವ ಕೂಲಿಕಾರರ ಮಹೇಂದ್ರ ಗೂಡ್ಸ್ ವಾಹನವೊಂದು ಬರಗೂರು ಕ್ರಾಸ್ ಬಳಿ ರಸ್ತೆಗೆ ಪಲ್ಟಿಯಾಗಿ, ಗಾಯಗೊಂಡು ಉಪವಿಭಾಗ ಆ ಸ್ಪತ್ರೆಗೆ ದಾಖಲಾದ ಕೂಲಿಕಾರರ ಆರೋಗ್ಯವನ್ನ ಜಿಲ್ಲಾ ಉ ಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ವಿಚಾರಿಸಿದ ರು.   

ಗಂಗಾವತಿ: ಕನಕಗಿರಿ ತಾಲ್ಲೂಕಿನ ಜೀರಾಳ ಕಲ್ಗುಡಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಬರಗೂರು ಕ್ರಾಸ್ ಬಳಿ ಪಲ್ಟಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ.

ಮೂಸ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರರು ಉದ್ಯೋಗ ಖಾತ್ರಿ ಯೋಜನೆಯಡಿ ಜೀರಾಳ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಗೂಡ್ಸ್ ವಾಹನವೊಂದರಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ಅಲಕ್ಷ್ಯ ಹಾಗೂ ಅತಿವೇಗದ ಚಾಲನೆಯಿಂದ ವಾಹನ ಪಲ್ಟಿಯಾಗಿದ್ದು, ಮಹಿಳೆಯರು ಹಾಗೂ ಪುರುಷರು ಸೇರಿ ಒಟ್ಟು 30 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ 27 ಮಂದಿಯನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಕೂಲಿಕಾರರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ADVERTISEMENT

ಘಟನೆ ಕುರಿತ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸರ್ಕಾರಿ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ಮೇಲಾಧಿಕಾರಿಗಳಿಗೆ ಕರೆ ಮಾಡಿ, ವಾಹನ ಚಾಲಕ ಮತ್ತು ಪಂಚಾಯಿತಿ ಪಿಡಿಒ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.