ಜೈಲು (ಪ್ರಾತಿನಿಧಿಕ ಚಿತ್ರ)
ಕೊಪ್ಪಳ: ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಇಲ್ಲಿನ ಭಾಗ್ಯನಗರ ಶಾಖೆಯ ಜೂನಿಯರ್ ಸಹಾಯಕ ಅಧಿಕಾರಿ ಜಿ.ಮಂಜುನಾಥ ಎಂಬುವವರ ಮೇಲಿನ ಆರೋಪ ಸಾಬೀತಾಗಿದ್ದು ಇಲ್ಲಿನ ಸಿಜೆಎಂ ನ್ಯಾಯಾಲಯವು ಅಪರಾಧಿಗೆ ಏಳು ವರ್ಷ ಸಾಧಾರಣ ಜೈಲು ಹಾಗೂ ₹10 ಸಾವಿರ ದಂಡ ವಿಧಿಸಿದೆ.
2002-03ನೇ ಸಾಲಿನಲ್ಲಿ ಭಾಗ್ಯನಗರ ಶಾಖೆಯಲ್ಲಿ ಹಾಸನ ಜಿಲ್ಲೆಯ ಗೋರೂರಿನ ಮಂಜುನಾಥ ಕೆಲಸ ಮಾಡುತ್ತಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡು ₹2.12 ಲಕ್ಷ ಮೌಲ್ಯದ ಮಗ್ಗಕ್ಕೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಿ ಬಂದಿದ್ದ ₹2.12 ಲಕ್ಷ ಪಡೆದು ಸ್ವಂತಕ್ಕೆ ಬಳಸಿಕೊಂಡಿದ್ದರು. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 2005ರಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಆಗಿನ ತನಿಖಾಧಿಕಾರಿ ಪೊಲೀಸ್ ಇನ್‌ಸ್ಟೆಕ್ಟರ್ ಶಿವಲಿಂಗರಾಧ್ಯ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮಲ್ಕಾರಿ ರಾಮಪ್ಪ ಒಡೆಯರ್ ಅವರು ಈ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.